Friday, November 20, 2026

ಪ್ರಾಯೋಗಿಕ ಆವೃತ್ತಿ

ಸಾಮಾಜಿಕ ನ್ಯಾಯ ಸಂವಿಧಾನ ನೀಡಿರುವ ವರದಾನ : ನ್ಯಾ. ಹೆಚ್. ಓಂಕಾರಮೂರ್ತಿ

ಸಾಮಾಜಿಕ ನ್ಯಾಯವು ಸಂವಿಧಾನವು ನಮಗೆ ನೀಡಿರುವ ವರದಾನವಾಗಿದೆ. ನಮ್ಮ ಪಾಲಿನ ಹಕ್ಕನ್ನು ನಾವು
ಪಡೆದುಕೊಳ್ಳುವ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವ ಕೆಲಸವನ್ನು ನಾಗರಿಕ ಸಮಾಜದ ಪ್ರತಿಯೊಬ್ಬರೂ ಮಾಡಬೇಕು ಎಂದು ಜೆಎಂಎಫ್‌ಸಿ ಸಿವಿಲ್ ನ್ಯಾಯಾಧೀಶರಾದ ಹೆಚ್.ಓಂಕಾರಮೂರ್ತಿ ಕರೆ ನೀಡಿದರು.

ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿಶ್ವ ಸಾಮಾಜಿಕ ನ್ಯಾಯ ದಿನದ ಅಂಗವಾಗಿ ಇಂದು ಆಯೋಜಿಸಿದ್ದ ಕಾನೂನು ಅರಿವು ಹಾಗೂ ಜಾಗೃತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ಆಶಯದಂತೆ ಕಾನೂನಿನ ಅಡಿಯಲ್ಲಿ ಜೀವನ ನಡೆಸುತ್ತಿರುವ ಮಾನವರಾದ ನಾವೆಲ್ಲರೂ ಒಂದು ಎಂಬ ಭಾವನೆಯನ್ನು ಮೂಡಿಸುವಲ್ಲಿ ಸಾಮಾಜಿಕ ನ್ಯಾಯವು ಯಶಸ್ವಿಯಾಗಿದೆ. ಬಡವ – ಶ್ರೀಮಂತ ಎಂಬ ಬೇಧ ಭಾವವಿಲ್ಲದಂತೆ ಬದುಕು ನಡೆಸಲು ವರವಾಗಿರುವ ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯ ವನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ. ಜಾತಿ ಮತ, ಪಂಥಗಳಿಂದ ಮುಕ್ತವಾದ ಸಮಾನತೆಯಿಂದ ಕೂಡಿರುವ ಸಮಾಜದ ನಿರ್ಮಾಣಕ್ಕೆ ಸಾಮಾಜಿಕ ನ್ಯಾಯವು ಪ್ರಬಲ ವಾದ ಶಕ್ತಿಯಾಗಿದೆ ಎಂದರು.

ಅಪರ ಸಿವಿಲ್ ನ್ಯಾಯಾಧೀಶರಾದ ಕೆ.ವಿ.ಅರ್ಪಿತಾ ಮಾತನಾಡಿ ದೇಶಕ್ಕೆ ಸ್ವಾತಂತ್ರ ಬಂದು 75 ವರ್ಷಗಳು ಕಳೆದು ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಈ ಶುಭ ಸಂದರ್ಭದಲ್ಲಿಯೂ ಶ್ರೀಸಾಮಾನ್ಯರ ಬದುಕು ಮಾತ್ರ ಇಂದಿಗೂ ಹಸನಾಗಿಲ್ಲ. ಬಡವರು ಮತ್ತು ಶ್ರೀಮಂತರ ನಡುವಿನ ಅಂತರವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲ ಕೆ.ಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಪರ ಸಿವಿಲ್ ನ್ಯಾಯಾಧೀಶರಾದ ಶಕುಂತಲಾ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎನ್.ಆರ್.ರವಿಶಂಕರ್, ಪ್ರಧಾನ ಕಾರ್ಯದರ್ಶಿ ಆರ್.ಕೆ.ರಾಜೇಗೌಡ, ಉಪ ಪ್ರಾಂಶುಪಾಲ ರವಿಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಸೀತಾರಾಂ ಮಾತನಾಡಿದರು. ಸರ್ಕಾರಿ ಅಭಿಯೋಜಕ ಬಿ.ಸಿ.ರಾಜೇಶ್, ವಕೀಲರ ಸಂಘದ ಉಪಾಧ್ಯಕ್ಷ ಬಿ.ಸಿ.ದಿನೇಶ್, ಖಜಾಂಚಿ ಡಿ.ಆರ್.ಜಗದೀಶ್, ಎನ್.ಎಸ್.ಎಸ್. ಅಧಿಕಾರಿ ಎಸ್.ಚಂದ್ರಶೇಖರ್ ಸೇರಿದಂತೆ ಕಾಲೇಜಿನ ಅಧ್ಯಾಪಕರು, ವಕೀಲರು ಹಾಗೂ ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ