Thursday, October 10, 2024

ಪ್ರಾಯೋಗಿಕ ಆವೃತ್ತಿ

ಸಮಾಜ ಸುಧಾರಣೆ ಮತ್ತು ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ಪ್ರಮುಖ

ಸಮಾಜದಲ್ಲಿ ನಡೆದಿರುವ ಅನೇಕ ಸುಧಾರಣೆ ಮತ್ತು ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ತಿಳಿಸಿದರು.

ಶ್ರೀರಂಗಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ 2022-2025 ನೇ ಸಾಲಿನ ಪತ್ರಕರ್ತರ ಮೂಲಕ ಆಡಳಿತ ಮಂಡಳಿ ಅಧಿಕಾರ ಸ್ವೀಕಾರ ಹಾಗೂ ಪತ್ರಿಕಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಸುಧಾರಣೆಗೆ ಪ್ರತಿದಿನ ತೊಡಗಿಕೊಂಡಿರುವ ಪತ್ರಕರ್ತರಿಗೂ ಒಂದು ದಿನ ನಿಗದಿ ಮಾಡಿ ಪತ್ರಿಕಾ ದಿನಾಚರಣೆ ಆಚರಿಸುತ್ತಿರುವುದು ಅರ್ಥಪೂರ್ಣವಾದ ಕಾರ್ಯಕ್ರಮವಾಗಿದೆ.

ಪ್ರಸ್ತುತ ವ್ಯವಸ್ಥೆಯನ್ನು ನೇರವಾಗಿ,ದಿಟ್ಟವಾಗಿ ಸಾರ್ವಜನಿಕರಿಗೆ ತಲುಪಿಸುವ ಜವಾಬ್ದಾರಿ ಪತ್ರಕರ್ತರದ್ದಾಗಿದೆ.ಅವರು ಸಮಾಜದಲ್ಲಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಪತ್ರಕರ್ತರ ಮುಕ್ತವಾಗಿ ವರದಿ ಮಾಡಬೇಕು ಎಂದರು.

ಪತ್ರಕರ್ತರ ಸಂಘದ ನೂತನ ಮಂಡಳಿ ವ್ಯವಸ್ಥಿತ ರೀತಿಯಲ್ಲಿ ಕಾರ್ಯ ನಿರ್ವಹಿಸುವ ಜೊತೆಗೆ ತಮ್ಮ ಕುಟುಂಬದ ರಕ್ಷಣೆ ಹಾಗೂ ಅಭಿವೃದ್ಧಿಯ ಬಗ್ಗೆ ಯೋಜನೆ ರೂಪಿಸಬೇಕು.

ದೈವ ಸಂಕಲ್ಪದಿಂದ ಕೃಷ್ಣರಾಜ ಸಾಗರ ಜಲಾಶಯ ತುಂಬಿರುವುದು ತಂದಿದೆ.ರೈತಾಪಿ ವರ್ಗ ಹಾಗೂ ನದಿ ಪಾತ್ರದಲ್ಲಿರುವ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಪತ್ರಕರ್ತರಲ್ಲಿ ಸಣ್ಣ ಪುಟ್ಟ ಮನಸ್ತಾಪಗಳು ಇರುತ್ತವೆ. ಅದೆಲ್ಲವನ್ನೂ ಮರೆತು ನೀವೆಲ್ಲರೂ ಸಾಮೂಹಿಕವಾಗಿ, ಒಗ್ಗಟ್ಟಿನಿಂದ ಸಂಘದ ಚಟುವಟಿಕೆ ನಡೆಸಬೇಕು.ನಿಮ್ಮ ಜೊತೆ ನಾನು ಸದಾ ಇರುತ್ತೇನೆ ಎಂದು ಭರವಸೆ ನೀಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಮತ್ತೀಕೆರೆ ಜಯರಾಮ್ ಮಾತನಾಡಿ,ಪತ್ರಕರ್ತರ ಜೀವನಕ್ಕೆ ಭದ್ರತೆಯ ಇಲ್ಲ.ಪತ್ರಕರ್ತರಿಗೆ ಕ್ಷೇಮನಿಧಿ ಮತ್ತು ಸಣ್ಣ ಬಡಾವಣೆ ನಿರ್ಮಾಣಕ್ಕೆ ಶಾಸಕ ರವೀಂದ್ರ ಶ್ರೀಕಂಠಯ್ಯ,ಯುವನಾಯಕ ಸಚ್ಚಿದಾನಂದ ಸಹಕಾರ ನೀಡಬೇಕು.

ಶ್ರೀರಂಗಪಟ್ಟಣ ಪತ್ರಕರ್ತರ ಸಂಘದ ಕ್ಷೇಮನಿಧಿಗೆ ಶಾಸಕರು ಹಾಗೂ ಜನನಾಯಕರು ದೇಣಿಗೆ ನೀಡಬೇಕು ಎಂದು ಮನವಿ ಮಾಡಿದರು.
ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ಸಿ.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.

ಶ್ರೀರಂಗಪಟ್ಟಣ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಗಂಜಾಂ ಮಂಜು,ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಅಧಿಕಾರ ಸ್ವೀಕರಿಸಿದರು.ಪತ್ರಿಕಾ ವಿತರಕರಿಗೆ ಸನ್ಮಾನ ಮಾಡಲಾಯಿತು.

ಯುವ ಮುಖಂಡ ಇಂಡುವಾಳು ಸಚ್ಚಿದಾನಂದ,ಜಿ.ಪಂ.ಮಾಜಿ ಸದಸ್ಯ ಲಿಂಗರಾಜು,ಉದ್ಯಮಿ ದೊಡ್ಡೇಗೌಡನ ಕೊಪ್ಪಲು ಮಧುಸೂದನ್,ಟಿ.ಶ್ರೀಧರ್, ಪುರಸಭೆ ಅಧ್ಯಕ್ಷೆ ನಿರ್ಮಲ ವೇಣುಗೋಪಾಲ್,ಉಪಾಧ್ಯಕ್ಷ ಕೃಷ್ಣಪ್ಪ, ಪತ್ರಕರ್ತರಾದ ಸೋಮಶೇಖರ್ ಕೆರಗೋಡು,ಕೆ.ಎನ್.ನವೀನ್ ಕುಮಾರ್,ನಂಜುಂಡ ಸ್ವಾಮಿ,ಕಸಾಪ ಜಿಲ್ಲಾ ಅಧ್ಯಕ್ಷ ರವಿಕುಮಾರ್ ಸೇರಿದಂತೆ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!