Friday, September 20, 2024

ಪ್ರಾಯೋಗಿಕ ಆವೃತ್ತಿ

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ| ಜೆಡಿಎಸ್-ಬಿಜೆಪಿಗೆ ಶಾಕ್ ನೀಡಿದ ಶಾಸಕ ಎಸ್.ಟಿ.ಸೋಮಶೇಖರ್

ರಾಜ್ಯಸಭೆಗೆ ಇಂದು ನಡೆಯುತ್ತಿರುವ ಚುನಾವಣೆಯಲ್ಲಿ ಬೆಂಗಳೂರಿನ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಡ್ಡ ಮತದಾನ ಮಾಡುವ ಮೂಲಕ ಜೆಡಿಎಸ್ ಮತ್ತು ಬಿಜೆಪಿಗೆ ಶಾಕ್ ನೀಡಿದ್ದಾರೆ.

ಬಿಜೆಪಿಯಿಂದ ಅಂತರ ಕಾಯ್ದಕೊಂಡಿರುವ ಶಾಸಕ ಎಸ್‌.ಟಿ. ಸೋಮಶೇಖರ್ ಅವರು ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಅವರಂತೆಯೇ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಕೂಡ ಅಡ್ಡ ಮತದಾನ ಮಾಡುತ್ತಾರೆಂಬ ಚರ್ಚೆ ಬಿಜೆಪಿ-ಜೆಡಿಎಸ್ ನಾಯಕರನ್ನು ಚಿಂತೆಗೀಡು ಮಾಡಿದೆ.ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲ್ಲಿಸಲು ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಪ್ರಯತ್ನಿಸಿದ್ದರು.ಕಾಂಗ್ರೆಸ್ ಹಾಗೂ ಪಕ್ಷೇತರ ಶಾಸಕರನ್ನು ಸೆಳೆದು ಕಾಂಗ್ರೆಸ್ ನಾಯಕರಿಗೆ ಶಾಕ್ ಕೊಡುವುದಾಗಿ ಹೇಳಿಕೊಂಡಿದ್ದರು.

ಇದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ನಮ್ಮಲ್ಲಿ ಯಾರೂ ಕೂಡ ಅಡ್ಡ ಮತದಾನ ಮಾಡಲ್ಲ ಎಂದಿದ್ದರು.ಡಿ.ಕೆ.ಶಿವಕುಮಾರ್ ಚುನಾವಣೆಯ ದಿನ ಬಿಜೆಪಿ-ಜೆಡಿಎಸ್ ನಾಯಕರಿಗೆ ಬಿಗ್ ಶಾಕ್ ನೀಡಲು ತಯಾರಿ ಮಾಡಿಕೊಂಡಿದ್ದರು.ಅದರಂತೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರಿಂದ ಅಡ್ಡ ಮತದಾನ ಮಾಡಿಸುವ ಮೂಲಕ ಜೆಡಿಎಸ್ ಮತ್ತು ಬಿಜೆಪಿ ನಾಯಕರಿಗೆ ಸಖತ್ ಶಾಕ್ ನೀಡಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಎಸ್.ಟಿ. ಸೋಮಶೇಖ‌ರ್ ಅವರು ಕಾಂಗ್ರೆಸ್ ಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಚುನಾವಣಾ ಏಜೆಂಟ್‌ರೊಬ್ಬರು ಖಚಿತಪಡಿಸಿದ್ದಾರೆ.

ಮತದಾನಕ್ಕೂ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ್ದ ಸೋಮಶೇಖ‌ರ್ ಅವರು, “11 ವರ್ಷದಿಂದ ಎಲ್ಲರಿಗೂ ಮತ ಹಾಕಿದ್ದೇನೆ. ಆದರೆ, ರಾಜ್ಯಸಭೆಗೆ ಆಯ್ಕೆ ಆದವರು ಒಂದು ರೂಪಾಯಿ ಅನುದಾನವನ್ನೂ ಕೊಟ್ಟಿಲ್ಲ. ನೇರ ನೇರ ಹೇಳುತ್ತೇನೆ, ನಾನು ಈ ಬಾರಿ ಆತ್ಮಸಾಕ್ಷಿಯಂತೆ ಮತ ಹಾಕುತ್ತೇನೆ. ಕಳೆದ ಬಾರಿ (ಹಾಲಿ ಹಣಕಾಸು ಸಚಿವೆ) ನಿರ್ಮಲಾ ಸೀತಾರಾಮನ್ ಅವರಿಗೆ ಮತ ಹಾಕಿದ್ದೆ. ಆಮೇಲೆ ನಿರ್ಮಲಾ ಸೀತಾರಾಮನ್ ಭೇಟಿಗೆ ಅಪಾಯಿಟೆಂಟ್ ಕೂಡ ಕೊಡಲೇ ಇಲ್ಲ,” ಎಂದು ಬೇಸರ ಹೊರಹಾಕಿದರು.

ಇದರ ನಡುವೆ ಮತದಾನ ಮಾಡಿದ ಬಳಿಕ ಮಾತನಾಡಿರುವ ಎಸ್‌.ಟಿ. ಸೋಮಶೇಖ‌ರ್, “ಆತ್ಮಸಾಕ್ಷಿಗೆ ಅನುಗುಣವಾಗಿ ಮತದಾನ ಮಾಡಿದ್ದೇನೆ. ನಾನು ಮತದಾನ ಮಾಡಿದ್ದನ್ನು ಏಜೆಂಟ್‌ಗೆ ತೋರಿಸಿದ್ದೇನೆ,” ಎಂದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!