Sunday, May 5, 2024

ಪ್ರಾಯೋಗಿಕ ಆವೃತ್ತಿ

ಬೆಲೆ ಏರಿಕೆಯಿಂದ ಜನ ಜೀವನ ದುಸ್ತರ: ಸೋಮಶೇಖರ್

ದೇಶದಲ್ಲಿ 65% ಉದ್ಯೋಗ ಖಾಲಿ ಇದೆ, ಪ್ರಧಾನಿ ಮೋದಿ ನೀಡಿದ ರೈತರ ಆದಾಯ ದುಪ್ಪಟ್ಟು ಮಾಡುವ ಭರವಸೆ ಈಡೇರಿಲ್ಲ. ಬೆಲೆ ಏರಿಕೆಯಿಂದ ಮಧ್ಯಮ ವರ್ಗದ ಜೀವನ ದುಸ್ತರವಾಗಿದೆ ಎಂದು ಮಾಜಿ ಸಚಿವ ಬಿ ಸೋಮಶೇಖರ್ ತಿಳಿಸಿದರು.

ಮಳವಳ್ಳಿ ತಾಲೂಕಿನಾದ್ಯಂತ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡುತ್ತಿದ್ದ ವೇಳೆಯಲ್ಲಿ ಮಾತನಾಡಿದ ಅವರು, ಅಡುಗೆ ಅನಿಲ. ದಿನಸಿ ಪದಾರ್ಥಗಳು ಸೇರಿದಂತೆ ಎಲ್ಲಾ ಬೆಲೆ ಗಗನಕ್ಕೇರಿದೆ. ಜನರ ಜೀವನ ಸಂಕಷ್ಟ ದಿಂದ ಕೂಡಿದ್ದು . ರೈತರಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ಜಿಎಸ್‍ಟಿ ಬರೆ ಎಳೆದಿದೆ. ದೇಶದ ಎಲ್ಲಾ ಆಸ್ತಿಗಳು ಬಂಡವಾಳ ಶಾಹಿಗಳ ಪಾಲಾಗುತ್ತಿದೆ. ರೈತರ ಸಾಲ ಮನ್ನಾ ಮಾಡಲು ಸರ್ಕಾರಕ್ಕೆ ಆಗುತ್ತಿಲ್ಲ ಎಂದು ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ಬಾಂಡ್‌ ಹೆಸರಿನಲ್ಲಿ ಬಿಜೆಪಿಗೆ ನೂರಾರು ಕೋಟಿ ರೂ. ದೇಣಿಗೆ ನೀಡಿವೆ ನಂತರ ಅವರ ವಿರುದ್ಧದ ಪ್ರಕರಣಗಳನ್ನು ಕೈಬಿಡಲಾಗಿದ್ದು ನೋಟು ಅಮಾನ್ಯೀಕರಣದ ಮೂಲಕ ಕಪ್ಪುಹಣವನ್ನು ಬಿಳಿಯಾಗಿಸಿ ಬಿಜೆಪಿ ಖಾತೆಗೆ ಜಮಾ ಮಾಡಿದ್ದು ಹೇಗೆ ಎಂಬುದು ಈಗ ಸ್ಪಷ್ಟ ಪಡಿಸಬೇಕಿದೆ ಎಂದರು.

ಕರ್ನಾಟಕದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲುವು ಸಾಧಿಸುವುದರ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಮೈತ್ರಿಕೂಟ ಸರ್ಕಾರ ರಚನೆಯಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆಯಲ್ಲಿ ಸೋಮಶೇಖರ್, ಸಿದ್ದೇಗೌಡ, ಗಿರೀಶ್, ನಾಗಣ್ಣ ,ಶಿವಸ್ವಾಮಿ ಸೇರಿದಂತೆ ಇತರರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!