ರಾಜ್ಯ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಮದ್ದೂರು ತಾಲೂಕು ಹೊಂಬಾಳೆಗೌಡನ ದೊಡ್ಡಿ ಗ್ರಾಮದ ಸೋಮಶೇಖರ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ, ಜಿಲ್ಲಾ ಉಪನಿರ್ದೇಶಕರಾಗಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಛೇರಿಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಅವರ ಅಂತ್ಯಕ್ರಿಯೆಯು ಅ.17 ರಂದು( ಇಂದು) ಸಂಜೆ 5 ಗಂಟೆಗೆ ಮದ್ದೂರು ತಾಲೂಕು ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.