ತೀವ್ರ ಕುತೂಹಲ ಕೆರಳಿಸಿರುವ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಮತ ಎಣಿಕೆ ಕಾರ್ಯ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ನಡೆದಿದ್ದು, ಆರಂಭದಿಂದಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಧು ಜಿ.ಮಾದೇಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಅವರ ಬಿಜೆಪಿ ಅಭ್ಯರ್ಥಿ ರವಿಶಂಕರ್ ಅಲ್ಪ ಮತಗಳ ಅಂತರದಿಂದ ಹಿಂದುಳಿದಿದ್ದಾರೆ. ಮೊದಲ ಪ್ರಾಶಸ್ತ್ಯದ ಮತ ಎಣಿಕೆಯ ಮೊದಲ ಸುತ್ತಿನಲ್ಲಿ ಒಟ್ಟು 49,700 ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡ 8842 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಮಧು ಮಾದೇಗೌಡ 36,484 ಮತಗಳನ್ನು ಪಡೆದಿದ್ದರೆ, ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ರವಿಶಂಕರ್ 27642 ಮತಗಳ ಪಡೆದು ಅಲ್ಪ ಮತಗಳಿಂದ ಹಿಂದುಳಿದಿದ್ದಾರೆ.
ಮೈಸೂರಿನ ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾ ಅಧಿಕಾರಿಗಳಾದ ಜಿ.ಸಿ ಪ್ರಕಾಶ್ ಸುದ್ದಿಗಾರರೊಂದಿಗೆ ಮಾತನಾಡಿ, ಮೊದಲ ಪ್ರಾಶಸ್ತದ ಮೊದಲ ಸುತ್ತಿನಲ್ಲಿ 49,700. ಮತಗಳ ಎಣಿಕೆ ಕಾರ್ಯ ಮುಗಿದಿದ್ದು,
ಕಾಂಗ್ರೆಸ್ – 36484 ಮತ ಪಡೆದಿದ್ದು, ಬಿಜೆಪಿ -27642 ಪಡೆದಿದೆ. ಜೆಡಿಎಸ್ ಪಕ್ಷದ ಹೆಚ್.ಕೆ. ರಾಮು 8,512, ರೈತಸಂಘ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪ್ರಸನ್ನ ಗೌಡ 3,142, ಎನ್.ಎಸ್.ವಿನಯ್ 1,890, ಬಿಎಸ್ಪಿ ಅಭ್ಯರ್ಥಿ 1,418 ಮತ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.