Thursday, September 19, 2024

ಪ್ರಾಯೋಗಿಕ ಆವೃತ್ತಿ

ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ಕಾರ್ಯ ಪ್ರಾರಂಭ: ಡಾ.ಕುಮಾರ

ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು ನಮೂನೆ 19ರಲ್ಲಿ ಅರ್ಜಿ ಸ್ವೀಕರಿಸಲು ನವೆಂಬರ್ 6 ಕೊನೆಯ ದಿನಾಂಕವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ ತಿಳಿಸಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ಸಂಬಂಧ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗವು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗೊಳಪಡುವ ವಿಭಾಗದ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲಾಧಿಕಾರಿಗಳನ್ನು, ಆಯುಕ್ತರು ಮೈಸೂರು ನಗರ ಪಾಲಿಕೆ ಮೈಸೂರು, ಮೈಸೂರು ವಿಭಾಗದ ಆಯಾ ಉಪ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಉಪವಿಭಾಗಾಧಿಕಾರಿಗಳು, ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ್ ರನ್ನು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ನೇಮಿಸಿರುತ್ತದೆ ಎಂದರು.

ಹಿಂದಿನ ಮತದಾರರು ಅರ್ಜಿ ಸಲ್ಲಿಸಬೇಕು

ಕರ್ನಾಟಕ ದಕ್ಷಿಣ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧಪಡಿಸುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ  ನಮೂನೆ 19 ರಲ್ಲಿ  ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದರು.

ಅರ್ಜಿ ನಮೂನೆ 19ರಲ್ಲಿ ಅರ್ಜಿಯನ್ನು ಸಲ್ಲಿಸಲು  ನವೆಂಬರ್ 6 ಕೊನೆ ದಿನಾಂಕವಾಗಿದೆ, ಕರಡು ಮತದಾರರ ಪಟ್ಟಿಯು ನವೆಂಬರ್ 23ರಂದು ಪ್ರಕಟಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣಿಗಳಿಗಾಗಿ ನವೆಂಬರ್ 23ರಿಂದ ಡಿಸೆಂಬರ್ 9 ರೊಳಗೆ ಅರ್ಜಿ ಸಲ್ಲಿಸುವುದು. ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30 ರಂದು ಪ್ರಕಟಿಸಲಾಗುವುದು ಎಂದರು.

ನೋಂದಣಿಗೆ ಯಾರು ಅರ್ಹರು ?

ಭಾರತದ ಪ್ರಜೆಯಾಗಿರುವ ಮತ್ತು ಈ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಮತ್ತು 1ನೇ ನವೆಂಬರ್ 2023 ಕ್ಕೆ ಮೊದಲು ಅರು ವರ್ಷದ ಅವಧಿಯಲ್ಲಿ ಕನಿಷ್ಟ ಒಟ್ಟು ಮೂರು ವರ್ಷಗಳಷ್ಟು ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆಯಲ್ಲದ ನಿರ್ದಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವ್ಯಕ್ತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹರಾಗಿರುತ್ತಾರೆ ಎಂದರು.

ಯಾವುದೇ ವ್ಯಕ್ತಿಯು ನಮೂನೆ 19 ರಲ್ಲಿ ಅರ್ಜಿಯನ್ನು ಸಲ್ಲಿಸಿ ಶಿಕ್ಷಕರ ಕ್ಷೇತ್ರದಲ್ಲಿ ಮತದಾರನಾಗಿ ನೋಂದಾಯಿಸಿಕೊಳ್ಳಲು ತನ್ನ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ತಾನು ಹಿಂದಿನ ಆರು ವಷÀðಗಳಲ್ಲಿ ಒಟ್ಟು ಮೂರು ವಷÀðಗಳು ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಕುರಿತು ಅರ್ಜಿಯೊಂದಿಗೆ ಪ್ರಮಾಣ ಪತ್ರವನ್ನು ಲಗತ್ತಿಸಿ ಸಲ್ಲಿಸತಕ್ಕದ್ದು. (ಪ್ರಮಾಣ ಪತ್ರದ ಮಾದರಿ ಮತ್ತು ನಮೂನೆ-19 ನ್ನು  ಪಡೆಯಬಹುದು ಎಂದರು.

ಅರ್ಜಿಯನ್ನು ಸಲ್ಲಿಸುವ ದಿನಾಂಕದಂದು ಯಾವುದೇ ವ್ಯಕ್ತಿಯು ಭೋದನಾ ವೃತ್ತಿಯಲ್ಲಿ ನಿರತನಾಗಿರದಿದ್ದಲಿ, ಪ್ರಮಾಣ ಪತ್ರವನ್ನು ಅಂತಹ ವ್ಯಕ್ತಿಯು ಕೊನೆಯದಾಗಿ ಸೇವೆ ಸಲ್ಲಿಸಿದ ಸಂಸ್ಥೆಯ ಮುಖ್ಯಸ್ಥರಿಂದ ಸಹಿ ಮಾಡಿರತಕ್ಕದ್ದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಖುದ್ದಾಗಿ ಅಥವಾ ಅಂಚೆ ಮುಖಾಂತರ ಒಟ್ಟಾಗಿ ಸಲ್ಲಿಸಿದ ಅರ್ಜಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗಾಗಿ ಪರಿಗಣಿಸಲಾಗುವುದಿಲ್ಲ, ಆದರೆ ಸಂಸ್ಥೆಯ ಮುಖ್ಯಸ್ಥರು ಅವರ ಸಿಬ್ಬಂದಿಯ ಎಲ್ಲಾ ಅರ್ಜಿಗಳನ್ನು ಒಟ್ಟಾರೆಯಾಗಿ ಕಳುಹಿಸಬಹುದು. ಒಂದೇ ಕುಟುಂಬದ ಇತರ ಸದಸ್ಯರ ನಮೂನೆ-19 ರ ಅರ್ಜಿಗಳನ್ನು ಕುಟುಂಬದ ಒಬ್ಬ ಸದಸ್ಯರು ಸಲ್ಲಿಸಬಹುದು ಹಾಗೂ ಪ್ರತಿ ಸದಸ್ಯನಿಗೆ ಸಂಬಂಧಿಸಿದಂತೆ ಮೂಲ ಪ್ರಮಾಣ ಪತ್ರಗಳನ್ನು ಒದಗಿಸತಕ್ಕದ್ದು ಎಂದರು.

ಅರ್ಜಿಯಲ್ಲಿ ತಪ್ಪು ಅಥವಾ ತಪ್ಪೆಂದು ಅವನು ತಿಳಿದಿರುವ ಅಥವಾ ನಂಬುವಂತಹ ಅಥವಾ ಸತ್ಯವೆಂದು ನಂಬಲಾಗದಿರುವಂತಹ ಹೇಳಿಕೆಗಳನ್ನು ಅಥವಾ ಘೋಷಣೆಗಳನ್ನು ಮಾಡುವ ಯಾವುದೇ ವ್ಯಕ್ತಿಯನ್ನು ಪ್ರಜಾ ಪ್ರಾತಿನಿಧ್ಯ ಅಧಿನಿಯಮ 1950 ರ 31ನೇ ಪ್ರಕರಣದ ಮೇರೆಗೆ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.

ನಮೂನೆ-19 ರಲ್ಲಿನ ಅರ್ಜಿಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿ, ನಿಯೋಜಿತ ಅಧಿಕಾರಿಗಳವರ ಕಚೇರಿಯಿಂದ ಪಡೆಯಬಹುದು. ಕೈಬರಹದ, ಬೆರಳಚ್ಚು ಮಾಡಿದ ಅಥವಾ ಖಾಸಗಿಯಾಗಿ ಮುದ್ರಿಸಿದ ನಮೂನೆಗಳನ್ನು ಕೂಡ ಅಂಗೀಕರಿಸಲಾಗುವುದು ಹಾಗೂ ಅರ್ಜಿಗಳನ್ನು ಬಲ್ಕ್ (ಒಟ್ಟಿಗೆ) ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್ ನಾಗರಾಜು, ಪಾಂಡವಪುರ ಉಪ ವಿಭಾಗಾಧಿಕಾರಿ  ಎಲ್. ಎಂ ನಂದೀಶ್,  ಡಿಡಿಪಿಯು ಎಸ್ ಉಮೇಶ್, ನಗರಸಭೆ ಪೌರಯುಕ್ತರಾದ ಮಂಜುನಾಥ್ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!