Friday, September 20, 2024

ಪ್ರಾಯೋಗಿಕ ಆವೃತ್ತಿ

ಬಿತ್ತನೆ ಬೀಜ ಒದಗಿಸಲು ಕ್ರಮ ವಹಿಸಿ: ಚಲುವರಾಯಸ್ವಾಮಿ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬಿತ್ತನೆ ಬೀಜ ಒದಗಿಸಲು ಅಧಿಕಾರಿಗಳು ಕ್ರಮ ವಹಿಸಬೇಕೆಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿಂದು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗುತ್ತಿದ್ದು, ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಗೆ ಪ್ರಥಮ ಆದ್ಯತೆ ನೀಡಬೇಕು.ಬಿತ್ತನೆ ಬೀಜದ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ರೈತರಿಂದ ಬಿತ್ತನೆ ಬೀಜ ಮತ್ತು ರಸಗೊಬ್ಬರ ಬಗ್ಗೆ ಯಾವುದೇ ದೂರುಗಳು ಬರಬಾರದು. ಅಂತಹ ಸಂದರ್ಭ ಬಂದರೆ ತ್ವರಿತಗತಿಯಲ್ಲಿ ಕ್ರಮ ಕೈಗೊಂಡು ಸಮಸ್ಯೆಗೆ ಸ್ಪಂದಿಸಬೇಕು.ರೈತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ಮದ್ದೂರು ಶಾಸಕ ಕೆ.ಎಂ ಉದಯ್, ತಹಶೀಲ್ದಾರ್ ನರಸಿಂಹಮೂರ್ತಿ, ಕಾರ್ಯಪಾಲಕ ಅಭಿಯಂತರ ಹರ್ಷ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!