Friday, November 20, 2026

ಪ್ರಾಯೋಗಿಕ ಆವೃತ್ತಿ

ಸೌಜನ್ಯ ಹಂತಕರ ಬಗ್ಗೆ ಬಿಜೆಪಿಯವರಿಗೆ ಮಾಹಿತಿ ಇದ್ದರೂ ಗೌಪ್ಯವಾಗಿ ಇಟ್ಟಿರುವುದೇಕೆ? ; ಪ್ರಿಯಾಂಕ್ ಖರ್ಗೆ

ಸೌಜನ್ಯ ಹಂತಕರ ಬಗ್ಗೆ ಬಿಜೆಪಿಯವರಿಗೆ ಮಾಹಿತಿ ಇದ್ದರೂ ಅಂದಿನಿಂದ ಇಂದಿನವರೆಗೂ ಗೌಪ್ಯವಾಗಿ ಇಟ್ಟಿರುವುದೇಕೆ? ಈಗಲೂ SIT ಮುಂದೆ ಮಾಹಿತಿ ನೀಡಲು ಮುಕ್ತ ಅವಕಾಶವಿದೆ, ಸೌಜನ್ಯ ಹಂತಕರ ಬಗ್ಗೆ ಮಾಹಿತಿ ನೀಡುವ ಬಿಜೆಪಿ ನಾಯಕರಿಗೆ ರಕ್ಷಣೆ ಒದಗಿಸುವುದು ನಮ್ಮ ಸರ್ಕಾರದ ಜವಾಬ್ದಾರಿ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಐಟಿ,ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

“>

 

ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯ ಬಹಿರಂಗಪಡಿಸಲಿ. ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾಗಿದ್ದ ಕಾಲದಲ್ಲಿ ಹೇಳಿರುವುದು, ಹಾಗಾಗಿ ಈ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ ಎಂದು ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಬಿಜೆಪಿಯವರು ಸೌಜನ್ಯ ಹತ್ಯೆಗೆ ನ್ಯಾಯ ಒದಗಿಸುವ ತಮ್ಮ ವಾಗ್ದಾನವನ್ನು ನೆನಪು ಮಾಡಿಕೊಳ್ಳಲಿ, ಹಂತಕರ ಬಗ್ಗೆ ತಮಗಿರುವ ಮಾಹಿತಿ ಬಹಿರಂಗಪಡಿಸಿ ತಮ್ಮ ಬದ್ಧತೆಯನ್ನು ನಿರೂಪಿಸಲಿ ಎಂದು ಖರ್ಗೆ ಸಲಹೆ ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ