Thursday, November 19, 2026

ಪ್ರಾಯೋಗಿಕ ಆವೃತ್ತಿ

ಸೌಜನ್ಯ ನ್ಯಾಯಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ – ಪಚ್ಚೆ ನಂಜುಂಡಸ್ವಾಮಿ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ, ಸೌಜನ್ಯ ಆತ್ಮಕ್ಕೆ ಶಾಂತಿ ಕೋರುವ ಸಲುವಾಗಿ ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಸಮಿತಿಯ ವತಿಯಿಂದ ಏಪ್ರಿಲ್ 4ರಂದು ಮಂಡ್ಯನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಪಚ್ಚೆ ನಂಜುಂಡಸ್ವಾಮಿ ತಿಳಿಸಿದರು.

ಮಂಡ್ಯ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಆರೋಪಿಯನ್ನು ದೋಷ ಮುಕ್ತಗೊಳಿಸಿದ್ದು, ನಿಜವಾದ ಅಪರಾಧಿ ಯಾರು ಎಂಬುದನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಲಾಗುವುದು ಎಂದರು.

ಬ್ರೈನ್ ಮ್ಯಾಪಿಂಗ್ ಮಾಡಿ

ಕೃತ್ಯ ನಡೆದ ಸಮಯ ಸಾಕ್ಯಾಧಾರ ಕಲೆ ಹಾಕದೇ ಕರ್ತವ್ಯ ಲೋಪ ಎಸಗಿದ ಪೊಲೀಸ್, ಸಿಐಟಿ, ಸಿಬಿಐ ಅಧಿಕಾರಿಗಳನ್ನು ವಶಕ್ಕೆ ಪಡೆದು, ಬ್ರೈನ್ ಮ್ಯಾಪಿಂಗ್ ಮಾಡಿ ಸತ್ಯಾಸತ್ಯತೆ ಹೊರತಂದು ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಹೋರಾಟದಲ್ಲಿ ಗಿರೀಶ್ ಮಟ್ಟಣ್ಣನವರ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪದಾಧಿಕಾರಿಗಳ ಆಯ್ಕೆ

ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಗೌರವಾಧ್ಯಕ್ಷರನ್ನಾಗಿ ಮದ್ದೂರು ರಾಮಕೃಷ್ಣಯ್ಯ, ರಾಜ್ಯ ಕಾಯಾಧ್ಯಕ್ಷರಾಗಿ ವಿದ್ಯಾಸಾಗರ್ ರಾಮೇಗೌಡ, ರಾಜ್ಯ ಉಪಾಧ್ಯಕ್ಷ ಹಾಗೂ ಮಂಡ್ಯ ಜಿಲ್ಲಾಧ್ಯಕ್ಷರಾಗಿ ಇಂಡುವಾಳು ಚಂದ್ರಶೇಖರ್, ರಾಜ್ಯ ಉಪಾಧ್ಯಕ್ಷರಾಗಿ ಶಂಭೂನಹಳ್ಳಿ ಸುರೇಶ್, ಮನು ಸೋಮಯ್ಯ, ಅಣ್ಣೂರು ಮಹೇಂದ್ರ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಂಜೇಶ್‌ಗೌಡ, ಕೀಳಘಟ್ಟ ನಂಜುಂಡಯ್ಯ, ಸೋ.ಸಿ.ಪ್ರಕಾಶ್, ಉಮೇಶ್ ಮದ್ದೂರು, ಶಿವಳ್ಳಿ ಚಂದ್ರಶೇಖರ್, ರಾಮಲಿಂಗೇಗೌಡ, ಸಂತೋಷ್ ಮಂಡ್ಯಗೌಡ ಅವರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ರಾಜ್ಯಾದ್ಯಂತ ಶೀಘ್ರವಾಗಿ ವಿಸ್ತರಿಸಲಾಗುವುದು ಎಂದು ಮಾಹಿತಿ ನೀಡಿದರು

ಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಳ್ಳಿ ಚಂದ್ರಶೇಖರ್, ಅಣ್ಣೂರು ಮಹೇಂದ್ರ, ಸಂತೋಷ್ ಮಂಡ್ಯಗೌಡ, ಪಣಕನಹಳ್ಳೀ ನಾಗಣ್ಣ, ಚಿಕ್ಕಮರಿಗೌಡ, ಮರಿಚನ್ನೇಗೌಡ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ