Sunday, November 22, 2026

ಪ್ರಾಯೋಗಿಕ ಆವೃತ್ತಿ

ವಿಶೇಷ ಚೇತನರಿಗೆ ವಿವಿಧ ಸೌಲಭ್ಯ : ಎಚ್‌.ಎಸ್‌.ಮಂಜು

ವಿಶೇಷ ಚೇತನರು ತಮ್ಮ ಸ್ವಾವಲಂಬನೆಯಿಂದ ಜೀವನ ನಡೆಸಲು ನಗರಸಭೆಯಿಂದ ದ್ವಿಚಕ್ರ ವಾಹನವನ್ನು ನೀಡಲಾಗುತ್ತಿದೆ. ಹಾಗಾಗಿ ನಾವು ವಿಶೇಷ ಚೇತನರಿಂದ ಅರ್ಜಿ ಆಹ್ವಾನಿಸಿದ ಸಂದರ್ಭದಲ್ಲಿ ಹಲವು ಮಂದಿ ಅರ್ಜಿಗಳನ್ನು ಹಾಕಿದ್ದಾರೆ. ಬಂದಿರುವ ಅರ್ಜಿಗಳನ್ನು ಪರಿಶೀಲನೆ ಮಾಡಲಾಗಿದೆ ಎಂದು ನಗರಸಭೆ ಅಧ್ಯಕ್ಷ ಎಚ್‌.ಎಸ್‌.ಮಂಜು ಹೇಳಿದರು.

ಮಂಡ್ಯ ನಗರದ ನಗರಸಭೆ ಆವರಣದಲ್ಲಿ ಶನಿವಾರ ವಿಶೇಷ ಚೇತನರಿಗೆ ದ್ವಿಚಕ್ರ ವಾಹನ ನೀಡುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ವಿಶೇಷ ಚೇತನರು ಸ್ವಂತ ಉದ್ಯೋಗ ಮಾಡಲು ಬ್ಯಾಂಕ್‌ನಲ್ಲಿ ಒಂದು ಲಕ್ಷ ಸಾಲ ಸೌಲಭ್ಯ ನೀಡಲಾಗುತ್ತದೆ. ಈ ಸಾಲಕ್ಕೆ ನಗರಸಭೆಯಿಂದ ಶೇ.50ರಷ್ಟು ಪ್ರೋತ್ಸಾಹ ಧನವನ್ನು ನೀಡಬಹುದಾಗಿದೆ. ಈ ಬಗ್ಗೆ ಪರಿಶೀಲಿಸಿ ಅರ್ಹರಿಗೆ ಈ ಯೋಜನೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ನಗರಸಭೆಯಿಂದ ನೀಡಲಾಗುವ ದ್ವಿಚಕ್ರವಾಹನದಿಂದ ವಿಶೇಷ ಚೇತನರು ಸ್ವಂತ ಉದ್ಯೋಗವನ್ನು ಆರಂಭಿಸಿ ಬದುಕು ನಡೆಸಬೇಕು. ತಮ್ಮ ದಿನನಿತ್ಯದ ಖರ್ಚಿಗೆ ಯಾರನ್ನು ಅವಲಂಭಿಸದೆ ತಮ್ಮ ಸ್ವಂತ ದುಡಿಮೆಯಿಂದ ಸ್ವಾವಲಂಭನೆಯಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭಾ ಅಯುಕ್ತ ಮಂಜುನಾಥ್‌ ಹಾಗೂ ನಗರಸಭೆ ನೌಕಕರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ