Thursday, November 19, 2026

ಪ್ರಾಯೋಗಿಕ ಆವೃತ್ತಿ

ಆಪರೇಷನ್ ಸಿಂಧೂರ | ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ; ಜಮೀರ್

ಕಾಶ್ಮೀರ ಕಣಿವೆಯ ಪೆಹಲ್ಯಾಮ್‌ನಲ್ಲಿ ಉಗ್ರಗಾಮಿಗಳು 26 ಭಾರತೀಯ ಪ್ರವಾಸಿಗರನ್ನು ಹತ್ಯೆಗೈದ ಹಿನ್ನಲೆಯಲ್ಲಿ ಭಾರತೀಯ ಸೈನ್ಯ “ಅಪರೇಷನ್ ಸಿಂಧೂರ” ಎಂಬ ಹೆಸರಿನಲ್ಲಿ ಕೈಗೊಂಡಿರುವ ಕಾರ್ಯಾಚರಣೆ ಯಶಸ್ವಿಯಾಗುವಂತೆ ರಾಜ್ಯ ಎಲ್ಲ ಮಸೀದಿಗಳಲ್ಲಿ ಮೇ 8 ರಂದು ವಿಶೇಷ ಪಾರ್ಥನೆ ಸಲ್ಲಿಸುವಂತೆ ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಸಚಿವ ಜಮೀರ್ ಅಹಮದ್ ಖಾನ್ ಆದೇಶ ಹೊರಡಿಸಿದ್ದಾರೆ.

ಭಾರತೀಯ ಸೇ ನಡೆಸಿದ ದಾಳಿಯಲ್ಲಿ ಉಗ್ರರ ನಲೆಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಲಾಗಿದೆ. ಭಯೋತ್ಪಾದಕರನ್ನು ದಮನ ಮಾಡಿ ದೇಶದ ಶಾಂತಿಗೆ ಮುಂದಾಗುತ್ತಿರುವ ನಮ್ಮ ಹೆಮ್ಮೆಯ ದೇಶದ ಸೈನಿಕರಿಗೆ ಶಕ್ತಿ ತುಂಬಲು ಅವರ ಶ್ರೇಯಸ್ಸಿಗಾಗಿ ರಾಜ್ಯದ ಎಲ್ಲಾ ವಕ್ಸ್‌ಗೆ ಸೇರಿದ ಮಸೀದಿಗಳಲ್ಲಿ ಹಾಗೂ ಇತರೆ ಮಸೀದಿಗಳಲ್ಲಿ ಪ್ರಾರ್ಥಿಸುವಂತೆ ಅವರು ಸೂಚನೆ ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ