Friday, November 20, 2026

ಪ್ರಾಯೋಗಿಕ ಆವೃತ್ತಿ

ವೇಗ ನಿಯಂತ್ರಣದಿಂದ ಅಪಘಾತ ಸಂಖ್ಯೆಯಲ್ಲಿ ಇಳಿಕೆ: ಅಲೋಕ್ ಕುಮಾರ್

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗ ನಿಯಂತ್ರಣ ಕಟ್ಟುನಿಟ್ಟಾಗಿ ಜಾರಿಗೆ ತಂದಿರುವ ಕಾರಣ ಕಳೆದೊಂದು ತಿಂಗಳಿಂದ ಅಪಘಾತ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

ಅವರಿಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿ ನಂತರ ಮಾತನಾಡಿದರು.

2ನೇ ಬಾರಿಗೆ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೂಡಿ ಪರಿಶೀಲನೆ ನಡೆಸಿದ್ದೇನೆ.ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತವಾದ ದಿನದಿಂದ ನೂರಾರು ಅಪಘಾತಗಳು ಸಂಭವಿಸಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಕಷ್ಟು ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಜೂನ್ 30 ರಂದು ಭೇಟಿ ನೀಡಿ ಅಪಘಾತಕ್ಕೆ ವಾಹನ ಸವಾರರ ಅತಿ ವೇಗವೇ ಕಾರಣವೆಂದು ತಿಳಿದು 100 ಕಿ.ಮೀ ವೇಗ ಮಿತಿ ಅಳವಡಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಪೋಲೀಸರು ಕಟ್ಟುನಿಟ್ಟಾಗಿ ಜಾರಿಗೆ ತಂದು ವಾಹನ ಸವಾರರಿಗೆ ದಂಡ ಹಾಕಿ ಜಾಗೃತಿ ಮೂಡಿಸಿದ ಪರಿಣಾಮ ಅಪಘಾತಗಳ ಸಂಖ್ಯೆ ಇಳಿಕೆಯಾಗಿದೆ.ಪೊಲೀಸ್ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಒಂದು ತಿಂಗಳೊಳಗೆ ಅಪಘಾತಗಳ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಒಂದಂಕಿಗೆ ಇಳಿದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಳೆದ ವರ್ಷ ಮದ್ರಾಸ್ ಹೈಕೋರ್ಟ್ ವೇಗ ನಿಯಂತ್ರಣದ ಬಗ್ಗೆ ಸೂಚನೆ ನೀಡಿದೆ. ಎಕ್ಸ್ ಪ್ರೆಸ್ ಹೈವೆಯಲ್ಲಿ ಗರಿಷ್ಠ 100 ಕಿ.ಮೀ ವೇಗದಲ್ಲಿ ಸಂಚರಿಸಬಹುದು.ಆದರೆ ಕೆಲವರು 120 ಕಿ.ಮೀ.ಗರಿಷ್ಠ ವೇಗದಲ್ಲಿ ಸಂಚರಿಸಬಹುದು ಎಂದು ತಪ್ಪು ತಿಳಿದು ಕೊಂಡಿದ್ದಾರೆ. ವಾಹನ ಸವಾರರು 100 ಕಿ.ಮೀ ವೇಗ ಮೀರಿದರೆ ಅಂತಹ ವಾಹನಗಳಿಗೆ ದಂಡ ಹಾಕುವುದು ಖಚಿತ ಎಂದು ಎಚ್ಚರಿಕೆ ನೀಡಿದರು.

ಜಾಹೀರಾತು

ಮಂಡ್ಯ ಹೊರ ವಲಯದಲ್ಲಿ ಈಗಾಗಲೇ ಆನ್ ಲೈನ್ ವೇಗ ಪರೀಕ್ಷಾ ಯಂತ್ರವನ್ನು ಅಳವಡಿಸಲಾಗಿದೆ. 100 ಕಿ.ಮೀ ವೇಗ ಮಿತಿ ದಾಟಿದ ವಾಹನಗಳಿಗೆ ಟೋಲ್ ಗಳಲ್ಲೇ ದಂಡ ವಿಧಿಸಲಾಗುತ್ತದೆ ಎಂದರು.

ಇದೇ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಎಎಸ್ಪಿ ತಿಮ್ಮಯ್ಯ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿವೇಕ್ ಜೈಸ್ವಾಲ್, ಯೋಜನಾ ನಿರ್ದೇಶಕ ರಾಹುಲ್ ಗುಪ್ತಾ, ಪ್ರಾಧಿಕಾರದ ಇಂಜಿನಿಯರ್ ಗಳು, ಡಿವೈಎಸ್ಪಿ ನವೀನ್ ಕುಮಾರ್, ಇನ್ಸ್ ಪೆಕ್ಟರ್ ಸಂತೋಷ್ ಮತ್ತಿತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ