Thursday, September 19, 2024

ಪ್ರಾಯೋಗಿಕ ಆವೃತ್ತಿ

ಶೀಘ್ರ ನ್ಯಾಯದಾನಕ್ಕೆ ವಕೀಲರು ಕೈಜೋಡಿಸಿ: ನ್ಯಾ. ಕೃಪಾ

ಕಕ್ಷಿದಾರರಿಗೆ ಶೀಘ್ರವಾಗಿ ನ್ಯಾಯದಾನ ನೀಡಲು ವಕೀಲರು ನ್ಯಾಯಾಂಗ ವ್ಯವಸ್ಥೆಯೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೃಪಾ ಮನವಿ ಮಾಡಿದರು.

ಕೆ.ಆರ್.ಪೇಟೆ ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ  ಅವರು ಮಾತನಾಡಿದರು.

ನ್ಯಾಯಾಂಗದ ರಥಕ್ಕೆ ವಕೀಲರು ಮತ್ತು ನ್ಯಾಯಾಧೀಶರು ಎರಡು ಚಕ್ರಗಳಿದ್ದಂತೆ. ವಕೀಲರು ಶೀಘ್ರ ನ್ಯಾಯದಾನಕ್ಕೆ ಪೂರಕವಾಗಿ ನ್ಯಾಯಾಂಗ ವ್ಯವಸ್ಥೆಗೆ ಪೂರಕವಾಗಿ ಕೆಲಸ ಮಾಡಿ ಸಮರ್ಥವಾಗಿ ವಾದ ಮಂಡಿಸುವ ಮೂಲಕ ಕೈಜೋಡಿಸಿ ಸಹಕಾರ ನೀಡಬೇಕು ಎಂದು ನ್ಯಾಯಾಧೀಶರಾದ ಕೃಪಾ ಮನವಿ ಮಾಡಿದರು.

ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ್ ಮಾತನಾಡಿ ವಕೀಲರಿಗೆ ಕಾನೂನು ಪುಸ್ತಕಗಳೇ ರಾಮಾಯಣ, ಮಹಾಭಾರತ ಗ್ರಂಥಗಳಿದ್ದಂತೆ ಆದ್ದರಿಂದ ಕೇಸುಗಳ ಆಳಕ್ಕೆ ಇಳಿದು ಕಾನೂನು ಪುಸ್ತಗಳನ್ನು ಓದಿಕೊಂಡು ಸಮರ್ಥವಾಗಿ ವಾದ ಮಂಡಿಸಿ ಕಕ್ಷಿದಾರರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ನ್ಯಾಯಾಧೀಶ ಮಂಜುನಾಥ್ ಮನವಿ ಮಾಡಿದರು.

ಅಪರ ಸಿವಿಲ್ ನ್ಯಾಯಾಧೀಶರಾದ ಶಕುಂತಲಾ, ಅರ್ಪಿತಾ, ವಕೀಲರ ಸಂಘದ ಅಧ್ಯಕ್ಷ ರವಿಶಂಕರ್, ಪ್ರಧಾನ ಕಾರ್ಯದರ್ಶಿ ರಾಜೇಗೌಡ, ಹಿರಿಯ ವಕೀಲರಾದ ಎಸ್.ಸಿ. ವಿಜಯಕುಮಾರ್ ಮಾತನಾಡಿದರು. ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!