Friday, September 20, 2024

ಪ್ರಾಯೋಗಿಕ ಆವೃತ್ತಿ

ಸ್ವಯಂಪ್ರೇರಿತವಾಗಿ ಪ್ಲಾಸ್ಟಿಕ್ ತ್ಯಜಿಸಿ

ಪರಿಸರ ಮತ್ತು ಜೀವ ಸಂಕುಲಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆಯನ್ನು ಸ್ವಯಂಪ್ರೇರಿತರಾಗಿ ತ್ಯಜಿಸಬೇಕು ಎಂದು ಮಂಡ್ಯದ ಡಿ.ದೇವರಾಜು ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ನಂದಿನಿ ರವಿಸಾವಂದಿಪುರ
ಕರೆ ನೀಡಿದರು.

ಮಂಡ್ಯ ನಗರದ ಡಿ.ದೇವರಾಜು ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಘಟಕ-1 ರಲ್ಲಿ ಇತ್ತೀಚೆಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ನ ಜಿಲ್ಲಾ ಘಟಕದ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪ್ಲಾಸ್ಟಿಕ್ ನಿಷೇಧ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ದಿನನಿತ್ಯದ ಬಳಕೆಯ ತರಕಾರಿ, ಸೊಪ್ಪು, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ತರಲು ಪ್ಲಾಸ್ಟಿಕ್ ಬದಲಿಗೆ ಬಟ್ಟೆ ಬ್ಯಾಗ್ ಗಳನ್ನು ಬಳಸಬೇಕು ಎಂದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ನ ಮಂಡ್ಯ ಜಿಲ್ಲಾ ಘಟಕದ ಸಂಚಾಲಕ ಪರಿಸರ ಮಿತ್ರ ಎಂದು ಖ್ಯಾತಿ ಪಡೆದಿರುವ ಜಯಶಂಕರ್ ಮಾತನಾಡಿ,ಪರಿಸರ ಮಾಲಿನ್ಯಕ್ಕೆ ಕಾರಣವಾಗಿರುವ ಪ್ಲಾಸ್ಟಿಕ್ ನಿಷೇಧಕ್ಕೆ ಸಾರ್ವಜನಿಕರ ಸಹಕಾರದ ಅಗತ್ಯವಿದ್ದು, ಜನತೆ ಸ್ವಯಂ ಪ್ರೇರಣೆಯಿಂದ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ನಿರ್ಮೂಲನೆ ಮಾಡಿ ಬಟ್ಟೆ ಬ್ಯಾಗ್ ಬಳಕೆ ಮಾಡುವಂತೆ ಅರಿವು ಮೂಡಿಸಲಾಯಿತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!