Tuesday, May 14, 2024

ಪ್ರಾಯೋಗಿಕ ಆವೃತ್ತಿ

ಮಾನಸಿಕ – ದೈಹಿಕ ಆರೋಗ್ಯಕ್ಕೆ ಕ್ರೀಡೆ ಮುಖ್ಯ ಸಾಧನ

ಮಾನವನ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಬಹು ಮುಖ್ಯ ಸಾಧನ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಎನ್ ಕೆ ವೆಂಕಟೇಶ್ ತಿಳಿಸಿದರು

ಶ್ರೀರಂಗಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಭಾನುವಾರ ನಡೆದ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಕುಷ್ಠ ರೋಗ ನಿರ್ಮೂಲನಾಧಿಕಾರಿ ಡಾ.ಕೆ ಪಿ ಅಶ್ವಥ್ ಮಾತನಾಡಿ, ತಾಲೂಕು ಮಟ್ಟದಲ್ಲಿ ಇಂತಹ ಕಾರ್ಯಕ್ರಮಗಳನ್ನು ತಪ್ಪದೆ ಹಮ್ಮಿಕೊಂಡು ಎಲ್ಲರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕೆಂದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಆಶಾಲತಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸಂಜಯ್ ಹಾಗೂ ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ಕೆ ಪಿ ಅಶ್ವಥ್ ರವರು ಉಪಸ್ಥಿತರಿದ್ದು

ಹೆಚ್ಪಿಎಲ್ ಕ್ರಿಕೆಟ್ ಪಂದ್ಯಾವಳಿ, ಮಹಿಳೆಯರಿಗಾಗಿ ಥ್ರೋಬಾಲ್, ಲೆಮನ್ ಇನ್ ಸ್ಪೂನ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು, ಎಲ್ಲಾ ಪಂದ್ಯಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ವೈದ್ಯಾಧಿಕಾರಿ ಡಾ.ಪಿ ಮಾರುತಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ನಳಿನಾ , ತಾಲ್ಲೂಕು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಜೆ ಶ್ರೀನಿವಾಸ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!