Saturday, May 18, 2024

ಪ್ರಾಯೋಗಿಕ ಆವೃತ್ತಿ

ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಆರ್ಥಿಕ ನೆರವು ನೀಡಿದ ಸಚ್ಚಿದಾನಂದ

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊಡಿಯಾಲ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಇಂಡುವಾಳು ಎಸ್.ಸಚ್ಚಿದಾನಂದ ಅವರು ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.

ಈ ವೇಳೆ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 50,000 ರೂ.ಧನ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಭಾಗವಾಗಿದ್ದು, ಚೌಡೇಶ್ವರಿ ತಾಯಿಯ ದರ್ಶನದಿಂದ ಮನಸ್ಸಿಗೆ ನೆಮ್ಮದಿ ಸಿಕ್ಕಿದೆ.ತಾಯಿ ಚೌಡೇಶ್ವರಿ ಎಲ್ಲರಿಗೂ ಒಳಿತು ಮಾಡಲಿ ಎಂದರು.

ಈ ಸಂದರ್ಭದಲ್ಲಿ ಗ್ರಾಮದ ಯಜಮಾನರು, ಸ್ಥಳೀಯ ಮುಖಂಡರು ಹಾಗೂ ಯುವಕ ಮಿತ್ರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!