Friday, November 20, 2026

ಪ್ರಾಯೋಗಿಕ ಆವೃತ್ತಿ

ಶ್ರೀ ಚಿಕ್ಕಮ್ಮದೇವಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೆರವು

ಮಂಡ್ಯ ತಾಲ್ಲೂಕಿನ ಸೂನಗಹಳ್ಳಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಚಿಕ್ಕಮ್ಮದೇವಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 1.5೦ಲಕ್ಷ ರೂ.ಗಳ ಆರ್ಥಿಕ ನೆರವನ್ನು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ನೀಡಿದ್ದಾರೆ.

ಇಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮಂಡ್ಯ ತಾಲೂಕು ಯೋಜನಾಧಿಕಾರಿ ನಾರಾಯಣ ಪಾಠಾಳಿ ಅವರು ಚಿಕ್ಕಮ್ಮ ದೇವಿ ದೇವಸ್ಥಾನ ಸಮಿತಿಯ ಪದಾಧಿಕಾರಿಗಳಿಗೆ 1.50 ಲಕ್ಷ ರೂ.ಗಳ ಡಿ.ಡಿ.ಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣ ಪಾಠಾಳಿರವರು, ಸೂನಗಹಳ್ಳಿಯ ಗ್ರಾಮಸ್ಥರು ಶ್ರೀ ಚಿಕ್ಕಮ್ಮ ದೇವಿಯ ದೇವಸ್ಥಾನಕ್ಕೆ ಆರ್ಥಿಕ ನೆರವು ನೀಡಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಅವರನ್ನು ಕೋರಿದ್ದರು. ಅದರಂತೆ ಧರ್ಮಾಧಿಕಾರಿಯವರು ಒಂದೂವರೆ ಲಕ್ಷ ರೂಗಳನ್ನು ದೇವಸ್ಥಾನಕ್ಕೆ ನೀಡಿದ್ದು, ಇದನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಎಲ್ಲರ ಸಹಕಾರದೊಂದಿಗೆ ಶ್ರದ್ಧಾ ಕೇಂದ್ರವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು.ಹಾಗೆಯೇ ಈ ಗ್ರಾಮದಲ್ಲಿ ಶಾಂತಿ, ಸಮೃದ್ಧಿ ಸದಾ ನೆಲಸಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಒಕ್ಕೂಟದ ಅಧ್ಯಕ್ಷರಾದ ಚಂದ್ರಕಲಾ, ಚಿಕ್ಕಮ್ಮ ದೇವಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಸೂನಗಹಳ್ಳಿ ಪುಟ್ಟಸ್ವಾಮಿ, ಮುಖಂಡರಾದ ಟಿ.ಎಸ್ ಅಣ್ಣೇಗೌಡ, ವಿಷಕಂಠಯ್ಯ, ಬಿ .ಎಸ್. ದೇವರಾಜು, ಮಹೇಶ್, ಸಿ.ಎಂ. ಮಮತಾ, ಪದ್ಮ, ಕಮಲಮ್ಮ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ