Thursday, September 19, 2024

ಪ್ರಾಯೋಗಿಕ ಆವೃತ್ತಿ

ಶ್ರೀ ಮಾಯಮ್ಮ ದೇವಾಲಯಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ನಿಂದ 2 ಲಕ್ಷ ₹ ದೇಣಿಗೆ

ಕೆ.ಆರ್‌.ಪೇಟೆ ತಾಲ್ಲೂಕಿನ ಕಸಬಾ ಹೋಬಳಿಯ ಚಿಲ್ಲದಹಳ್ಳಿ ಗ್ರಾಮದೇವತೆ ಶ್ರೀ ಮಾಯಮ್ಮ ದೇವಾಲಯದ ಪುನರುಜ್ಜೀವನ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಮಂಜುನಾಥ ಸ್ವಾಮಿಯವರ ಪ್ರಸಾದದ ರೂಪದಲ್ಲಿ ನೀಡಿರುವ 2 ಲಕ್ಷ ರೂಪಾಯಿಗಳ ಬ್ಯಾಂಕ್ ಡಿ.ಡಿಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ತಾಲ್ಲೂಕು ಯೋಜನಾಧಿಕಾರಿ ಮಮತಾಶೆಟ್ಟಿ ಅವರು ದೇವಾಲಯ ಸಮಿತಿಗೆ ವಿತರಣೆ ಮಾಡಿದರು.

ಶ್ರೀ ಮಾಯಮ್ಮ ದೇವಾಲಯ ಸಮಿತಿ ಸೇವಾ ಟ್ರಸ್ಟ್ ಅಧ್ಯಕ್ಷ ಪಟೇಲ್ ನಾಗೇಗೌಡ, ಕಾರ್ಯದರ್ಶಿ ಜಯರಾಮೇಗೌಡ, ಉಪಾಧ್ಯಕ್ಷ ವೆಂಕಟೇಶ್, ಖಜಾಂಚಿ ಮಹೇಂದ್ರ ಅವರಿಗೆ ಎರಡು ಲಕ್ಷ ರೂ.ಗಳ ಡಿ.ಡಿ.ಯನ್ನು ವಿತರಣೆ ಮಾಡಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ತಾಲ್ಲೂಕು ಯೋಜನಾಧಿಕಾರಿ ಮಮತಾಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ರಾಜ್ಯದಾದ್ಯಂತ ಹಳ್ಳಿಗಳ ಅಭಿವೃದ್ಧಿಗೆ ಹತ್ತು ಹಲವು ಸೇವಾ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.

ಅದರಲ್ಲಿ ಪ್ರಮುಖವಾಗಿ ಹಾಲಿನ ಡೇರಿಗಳ ನೂತನ ಕಟ್ಟಡಕ್ಕೆ ಅನುದಾನ, ಶಿಥಿಲಗೊಂಡಿರುವ ದೇವಾಲಯಗಳ ಜೀರ್ಣೋದ್ಧಾರಕ್ಕೆ, ಗ್ರಾಮ ದೇವತೆಯ ದೇವಾಲಯಗಳ ಅಭಿವೃದ್ಧಿಗೆ ಅನುದಾನ ನೀಡುವ ಮೂಲಕ ದೇವಾಲಯಗಳ ಅಭಿವೃದ್ಧಿಗೆ ಸಹಕಾರ ನೀಡುತ್ತಿದೆ. ಇದು ನಮ್ಮ ಸಂಸ್ಕೃತಿ ಪರಂಪರೆಯ ಉಳಿವಿಗೆ ಸಹಕಾರಿಯಾಗಿದೆ. ಜೊತೆಗೆ ನಿರ್ಗತಿಕರಿಗೆ ಮಾಸಾಶನ, ವಿಕಲಚೇತರಿಗೆ ಮಾಸಾಶನ ನೀಡುತ್ತಾ ನಿರ್ಗತಿಕರಿಗೆ ಆಸರೆಯಾಗಿದ್ದಾರೆ‌ ಎಂದರು. ಮದ್ಯವರ್ಜನ ಶಿಬಿರ ಆಯೋಜಿಸುವ ಮೂಲಕ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಲು ಸಹಕಾರಿಯಾಗಿದೆ.

ಕೆರೆ ಅಭಿವೃದ್ಧಿ ಯೋಜನೆ ಮೂಲಕ ಕೆರೆಗಳ ಹೂಳೆತ್ತಿಸಿ ಅಭಿವೃದ್ಧಿ ಪಡಿಸುವ ಮೂಲಕ ಅಂತರ್ಜಲ ವೃದ್ದಿಸಿ ರೈತರಿಗೆ ಹಾಗೂ ನಾಗರೀಕರಿಗೆ ಸಹಕಾರಿಯಾಗಿದ್ದಾರೆ. ಮಹಿಳಾ ಸ್ವಸಹಾಯ ಸಂಘದ ಸದಸ್ಯರುಗಳ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಮಾಸಿಕ ವಿದ್ಯಾರ್ಥಿ ವೇತನ ನೀಡುತ್ತಾ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡುತ್ತಿದ್ದಾರೆ. ಇದಲ್ಲದೆ ಅನಾರೋಗ್ಯ ಪೀಡಿತರಾದವರಿಗೆ ಆರ್ಥಿಕ ನೆರವು ಕಲ್ಪಿಸುವ ಮೂಲಕ ಬಡವರ ಆರೋಗ್ಯಕ್ಕಾಗಿ ಮಿಡಿಯುತ್ತಿದ್ದಾರೆ.ಹೀಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ನಾಡಿನ ಅಭಿವೃದ್ದಿಗೆ ಹಾಗೂ ಸಮಾಜದ ಅಭಿವೃದ್ದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮೂಲಕ ಡಾ.ವೀರೇಂದ್ರ ಹೆಗ್ಗಡೆಯವರು ಸಹಕಾರಿಯಾಗಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಆರ್.ಶ್ರೀನಿವಾಸ್ ಮಾತನಾಡಿ, ಕಳೆದ 20ದಿನಗಳ ಹಿಂದೆ ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರಹೆಗ್ಗಡೆಯವರನ್ನು ಭೇಟಿ ಮಾಡಿ ದೇವಾಲಯಕ್ಕೆ ಸಹಾಯಧನ ಕೋರಿ ಮನವಿ ಸಲ್ಲಿಸಿದ್ದೆವು. ಅದರಂತೆ ಕೇವಲ 20 ದಿನಗಳಲ್ಲಿ ದೇವಾಲಯ ಸಮಿತಿಗೆ 2ಲಕ್ಷ ರೂಪಾಯಿಗಳ ಸಹಾಯಧನವನ್ನು ಬಿಡಗಡೆ ಮಾಡಿದ್ದಾರೆ. ಹಾಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ವೀರೇಂದ್ರ ಹೆಗ್ಗಡೆಯವರಿಗೆ ಗ್ರಾಮಸ್ಥರ ಪರವಾಗಿ ಹೃದಯ ತುಂಬಿದ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ತಾಲ್ಲೂಕು ಯೋಜನಾಧಿಕಾರಿ ಮಮತಾಶೆಟ್ಟಿ ಅವರನ್ನು ದೇವಾಲಯ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಪಟೇಲ್ ನಾಗೇಗೌಡ ಹಾಗೂ ಗ್ರಾ.ಪಂ.ಸದಸ್ಯ ಶ್ರೀನಿವಾಸ್ ಅವರು ಗ್ರಾಮಸ್ಥರ ಪರವಾಗಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಪಟೇಲ್ ನಾಗೇಗೌಡ, ಉಪಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಜಯರಾಮೇಗೌಡ, ಖಜಾಂಚಿ ಮಹೇಂದ್ರ, ಗ್ರಾಮ ಪಂಚಾಯಿತಿ ಸದಸ್ಯ ಆರ್.ಶ್ರೀನಿವಾಸ್, ಅರ್ಚಕರಾದ ಕೃಷ್ಣೇಗೌಡ, ಮಂಜೇಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮೇಲ್ವಿಚಾರಕಿ ಅನ್ನಪೂರ್ಣ, ಸೇವಾ ಪ್ರತಿನಿಧಿ ಸುಮ, ಡೈರಿ ಅಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷೆ ಸುನಂದ, ಸ್ವಸಹಾಯ ಸಂಘದ ಸದಸ್ಯರುಗಳು ಗ್ರಾಮದ ಮುಖಂಡರುಗಳು ಸೇರಿದಂತೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!