Thursday, June 13, 2024

ಪ್ರಾಯೋಗಿಕ ಆವೃತ್ತಿ

ಚಾಮರಾಜನಗರ| ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು –ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ್ ಪ್ರಸಾದ್ ನಿಧನರಾಗಿದ್ದಾರೆ.

ಡಾ.‌ಸುದರ್ಶನ್ ಬಲ್ಲಾಳ್ ನೇತೃತ್ವದ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ನಸುಕಿನ ಜಾವ 1.30ರ ಸುಮಾರಿಗೆ  ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಸಿಎಂ ಸಿದ್ದರಾಮಯ್ಯ, ಮನೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು.

ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ ಹೆಸರಾಗಿದ್ದ 76 ವರ್ಷದ ಶ್ರೀನಿವಾಸ್ ಪ್ರಸಾದ್‌, ಕಳೆದ  ತಿಂಗಳು ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಸಂಸದರು, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ್ದಾರೆ.

2013 ರಿಂದ 2016 ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದರು.

ಮೂಲತಃ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಿಂದ ಬಂದವರು. ನಂತರ ಅವರು ಜನತಾ ದಳ – ಯುನೈಟೆಡ್ ಗೆ ಸೇರಿದರು. ನಂತರ ಅವರು ಕಾಂಗ್ರೆಸ್‌ಗೆ ಮರಳಿದ್ದರು ಮತ್ತು 2013ರಲ್ಲಿ ನಂಜನಗೂಡಿನಿಂದ ಶಾಸಕರಾಗಿ ಆಯ್ಕೆಯಾದರು. ನಂತರ ಅವರು ಮತ್ತೆ ತಮ್ಮ ಪಕ್ಷವನ್ನು ಬದಲಾಯಿಸುವ ಮೂಲಕ 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರಿದ್ದರು. ತಮ್ಮ ಸಿದ್ಧಾಂತಕ್ಕೆ ವಿರುದ್ಧವಾಗಿದ್ದರೂ ಅವರು ತಮ್ಮ ಪಕ್ಷದ ಒಳಗಿನ ವೈಮನಸ್ಸಿನ ಕಾರಣಕ್ಕೆ ಇಷ್ಟವಿಲ್ಲದಿದ್ದರೂ ಬಿಜೆಪಿ ಪಕ್ಷ ಸೇರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!