Sunday, November 22, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ ದಸರಾಗೆ ಜಿಲ್ಲಾ ಒಕ್ಕಲಿಗರ ಸಂಘ ವಿರೋಧ

ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಮಾಜಿ ಪ್ರಧಾನಿ, ಹಿರಿಯ ಮುತ್ಸದ್ಧಿ ಹೆಚ್.ಡಿ.ದೇವೇಗೌಡರ ಹೆಸರು ಕೈಬಿಟ್ಟಿರುವುದಕ್ಕೆ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ತಿಮ್ಮೇಗೌಡ ವಿರೋಧ ವ್ಯಕ್ತಪಡಿಸಿದರು.

ಮಂಡ್ಯ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 29ರಂದು ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಶ್ರೀರಂಗಪಟ್ಟಣ ದಸರ ಉತ್ಸವಕ್ಕೆ ಸಂಬಂಧಪಟ್ಟಂತೆ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಜಿಲ್ಲಾ ಶಾಸಕರುಗಳು, ತಹಶೀಲ್ದಾ‌ರ್,ಅಧಿಕಾರಿಗಳು ಮತ್ತು ಮುಂತಾದ ಪ್ರಮುಖ ಮುಖಂಡರುಗಳು ಇದ್ದಂತಹ ಸಭೆಯಲ್ಲಿ ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೆಸರನ್ನು ಸಭೆಯಲ್ಲಿ ಪ್ರಸ್ತಾಪಿಸಿದ್ದರು.

ಆದರೆ ಕಾರ್ಯಕ್ರಮ ಉದ್ಘಾಟನೆಯ ವೇಳೆಯಲ್ಲಿ ಅವರ ಹೆಸರನ್ನು ಕೈಬಿಟ್ಟಿರುವುದಕ್ಕೆ ಜಿಲ್ಲಾ ಒಕ್ಕಲಿಗ ಸಂಘ ತೀವ್ರ ವಿರೋಧವಿದೆ ಎಂದರು.

ಹಿರಿಯ ಮುತ್ಸದ್ಧಿ, ಮಾಜಿ ಪ್ರಧಾನಿಗಳು, ರಾಷ್ಟ್ರೀಯ ನಾಯಕರು, ಒಕ್ಕಲಿಗರ ಜನಾಂಗದ ಸರ್ವಶ್ರೇಷ್ಠ ನಾಯಕರಾಗಿರುವ ದೇವೇಗೌಡರ ಹೆಸರನ್ನು ಕೈಬಿಟ್ಟಿರುವುದು ಒಕ್ಕಲಿಗ ಜನಾಂಗಕ್ಕೆ ಮಾಡಿರುವಂತಹ ಅಪಮಾನವಾಗಿದೆ. ಹಾಗಾಗಿ ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ನಮ್ಮ ಜಿಲ್ಲಾ ಒಕ್ಕಲಿಗರ ಸಂಘದ ವಿರೋಧವಿದೆ ಎಂದರು.

ಗೋಷ್ಠಿಯಲ್ಲಿ ಜಗದೀಶ್ ಗೌಡ,ಕೋಣನಹಳ್ಳಿ ಮಂಜು, ಪಟೇಲ್ ದೇವರಾಜ್, ರಾಕೇಶ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ