ಮಂಡ್ಯ ಜಿಲ್ಲಾಡಳಿತದ ವತಿಯಿಂದ ಶ್ರೀರಂಗಪಟ್ಟಣದಲ್ಲಿ ಸೆ.28 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ಐತಿಹಾಸಿಕ ವೈಭವಯುತ ದಸರಾ ಉದ್ಘಾಟನೆಗೆ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು.

ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು, ಶ್ರೀಗಳನ್ನು ಭೇಟಿ ಮಾಡಿ ದಸರಾ ಉದ್ಘಾಟನೆಗೆ ಆಹ್ವಾನಿಸಿದರು.
ಇದೇ ಸಂದರರ್ಭದಲ್ಲಿ ಶ್ರೀರಂಗಪಟ್ಟಣ ದಸರಾ ಮಹೋತ್ಸವ-2022ರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವನ್ನು ಶ್ರೀಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ನೆರವೇರಿಸಿದರು.
ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತಾ ಹುಲ್ಮನಿ, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದ ಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.




