Thursday, September 19, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ : ಆಸ್ಪತ್ರೆಯ ತೀವ್ರ ನಿಗಾ ಘಟಕ ಉದ್ಘಾಟಿಸಿದ ಶಾಸಕ ರವೀಂದ್ರ ಶ್ರೀಕಂಠಯ್ಯ

ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 19 ಸುಸಜ್ಜಿತ ಬೆಡ್ ಗಳ ತೀವ್ರ ನಿಗಾ ಘಟಕಕ್ಕೆ ಶಾಸಕ ರವೀಂದ್ರ ಶ್ರೀಕಂಠಯ್ಯ ಸೋಮವಾರ ಚಾಲನೆ ನೀಡಿದರು.

ತೀವ್ರ ನಿಗಾ ಘಟಕ ಸೇರಿದಂತೆ ನವೀಕರಣಗೊಂಡ ಶಸ್ತ್ರ ಚಿಕಿತ್ಸಾ ಕೊಠಡಿ, ಮೈನರ್ ಶಸ್ತ್ರ ಚಿಕಿತ್ಸಾ ಕೊಠಡಿ,ಹಾಗೂ ಗಣಕೀಕೃತ ನೋಂದಣಿ ಕೇಂದ್ರವನ್ನು ಉದ್ಘಾಟಿಸಿ ಸಾರ್ವಜನಿಕರ ಸೇವೆಗಾಗಿ ಲೋಕಾರ್ಪಣೆ ಗೊಳಿಸಿದರು.

ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಸ್ಪತ್ರೆಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಹಲವು ಸೌಲಭ್ಯಗಳುಳ್ಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಇನ್ನು ಹಲವಾರು ವೈದ್ಯಕೀಯ ಉಪಕರಣಗಳು ಬರಬೇಕಾಗಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ಚರ್ಚಿಸಿ ವ್ಯವಸ್ಥೆ ಮಾಡಲಾಗುವುದು. ತಕ್ಷಣ ಜಾರಿಗೆ ಬರುವಂತೆ ಸುಸಜ್ಜಿತವಾದ ಕೊಠಡಿಗಳನ್ನು ಉದ್ಘಾಟನೆ ಮಾಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಸದಸ್ಯರಾದ ಗಂಜಾಂ ಶಿವು, ಗಂಜಾಂ ಕೃಷ್ಣಪ್ಪ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಡಾ.ನಾಗರಾಜು, ಡಾ.ಪ್ರಶಾಂತ, ಪುಟ್ಟರಾಜು, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎನ್.ಕೆ.ವೆಂಕಟೇಶ್, ಮುಖ್ಯ ವೈದ್ಯಾಧಿಕಾರಿ ಡಾ. ಪಿ ಮಾರುತಿ, ತಜ್ಞ ವೈದ್ಯರಾದ ಡಾ. ರಾಜು , ಸಿ ಡಿ ಪಿ ಒ ಅಶೋಕ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ, ಹಿರಿಯ ಆರೋಗ್ಯ ನಿರೀಕ್ಷ ಣಾಧಿಕಾರಿ ಜಿ.ಮೋಹನ್, ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಭಾನುಮತಿ ಹಾಗೂ ಸಾರ್ವಜನಿಕರು, ಆಸ್ಪತ್ರೆಯ ಸಿಬ್ಬಂದಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!