ಕಾರ್ಯನಿರತ ಪತ್ರಕರ್ತರ ಸಂಘ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಘಟಕದ ನೂತನ ಆಡಳಿತ ಮಂಡಳಿ ರಚನೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಶ್ರೀರಂಗಪಟ್ಟಣ ತಾಲೂಕು ಘಟಕದ ಸದಸ್ಯರೆಲ್ಲರ ಒಮ್ಮತದಿಂದಾಗಿ ಎಲ್ಲ ಪದಾಧಿಕಾರಿ ಹುದ್ದೆಗೂ ಅವಿರೋಧವಾಗಿ ಆಯ್ಕೆ ಮಾಡಲಾಯಿತು
ಅಧ್ಯಕ್ಷರಾಗಿ ರವೀಶ್ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಎಸ್.ಭರತ್ಕುಮಾರ್, ಉಪಾಧ್ಯಕ್ಷರಾಗಿ ಎಂ.ಸಿ.ಪ್ರಕಾಶ್, ಕಾರ್ಯದರ್ಶಿಯಾಗಿ ಬಿ.ಸಿ.ಸಂತೋಷ್ ಕುಮಾರ್ ಹಾಗೂ ಖಜಾಂಚಿಯಾಗಿ ಕೆ.ಜೆ.ಲೋಕೇಶ್ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಜಿಲ್ಲಾ ಘಟಕದ ಕಾರ್ಯದರ್ಶಿ ನಾಗೇಶ್ ಕರ್ತವ್ಯ ನಿರ್ವಹಿಸಿದರು.




