Monday, November 23, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ | 3 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕರ ಚಾಲನೆ

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಮಂಡ್ಯ ತಾಲೂಕಿನ ಕೊತ್ತತ್ತಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಗುದ್ದಲಿ ಪೂಜೆ ನೆರವೇರಿಸಿದರು

ಚೀರನಹಳ್ಳಿ ಗ್ರಾಮದಲ್ಲಿ ಮಂಡ್ಯ-ಕಿರಗಾವಲು ರಸ್ತೆಯಿಂದ ಮಂಡ್ಯ-ಕೆ.ಎಂ.ದೊಡ್ಡಿ ಸೇರುವ ರಸ್ತೆ ಮಾರ್ಗ ಹಾಲಹಳ್ಳಿ ಮಾದೇಶ್ವರ ದೇವಸ್ಥಾನ, ಚೀರನಹಳ್ಳಿ ಬಸವೇಶ್ವರ ದೇವಸ್ಥಾನ,ಕಮ್ಮನಾಯಕನಹಳ್ಳಿ, ಸರಪಳಿ:130 ಕಿಂದ 1.75 ಮತ್ತು 2.50 ರಿಂದ 3.50 ಕಿ.ಮೀ.ವರೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ 2 ಕೋಟಿ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ತಗ್ಗಹಳ್ಳಿ ಗ್ರಾಮದಲ್ಲಿ ಮಹಿಳಾ ಅಭಿವೃದ್ಧಿ ಇಲಾಖೆ ಹಾಗೂ ನರೇಗಾ ಯೋಜನೆ ಅಡಿ 20 ಲಕ್ಷ ರೂ. ವೆಚ್ಚದಲ್ಲಿ 3ನೇ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿ,ಲಾಳನಕೆರೆ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ರೂ.50 ಲಕ್ಷಗಳ ವೆಚ್ಚದಲ್ಲಿ ಲಾಳನಕೆರೆ ಕೋಡಿಯ ಹಳ್ಳಕ್ಕೆ ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಯಿಂದ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚು ಒತ್ತುಕೊಟ್ಟು ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಇತ್ತೀಚೆಗೆ ಜನಸಂಖ್ಯೆ ಹೆಚ್ಚಾದ ಮೇಲೆ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಲಾಳನಕೆರೆ ಹಾಗೂ ಕೊತ್ತತ್ತಿ ಭಾಗದ ಜನರು ಓಡಾಡಲು ಅನುಕೂಲವಾಗುವಂತೆ ಬ್ರಿಡ್ಜ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಅಭಿವೃದ್ಧಿಗೆ ಬೆನ್ನೆಲುಬಾಗಿ ಯಾವಾಗಲೂ ಇರಲಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಮಾಜಿ ಸದಸ್ಯ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮಿತ್ರ, ಗ್ರಾಪಂ ಅಧ್ಯಕ್ಷ ಕಿಟ್ಟಿ, ಮುಖಂಡರಾದ ಕೆ.ಎಚ್.ನಾಗರಾಜು, ತಗ್ಗಹಳ್ಳಿ ಕೃಷ್ಣ, ರವಿಕುಮಾರ್, ಟಿ.ಡಿ.ಬಸವರಾಜ್, ಹಳುವಾಡಿ ಕೃಷ್ಣ,ಪಲ್ಲವಿ, ಮಂಜುನಾಥ್,ನಾಗರಾಜು, ಮಹೇಂದ್ರ, ಕೊತ್ತತ್ತಿ ಗವಿಗೌಡ, ಸಣ್ಣಯ್ಯ, ಮಹಾದೇವಪ್ಪ, ಮಧು,ಪುಟ್ಟಣ್ಣ, ಮಂಜುನಾಥ್, ನಂಜುಂಡಸ್ವಾಮಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಸತೀಶ್, ಸಹಾಯಕ ಇಂಜಿನಿಯರ್ ಜಗದೀಶ್, ಸಣ್ಣ ನೀರಾವರಿ ಇಲಾಖೆ ಇಇ ಸಿ.ಶಂಕರ್, ಎಇಇ ಈಶ್ವರ್, ಪ್ರಥಮ ದರ್ಜೆ ಗುತ್ತಿಗೆದಾರ ಪಿ.ಬಿ.ಕರೀಗೌಡ, ಗುತ್ತಿಗೆದಾರ ಎಲ್.ಎನ್. ನಂಜುಂಡಪ್ಪ, ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ