Thursday, September 19, 2024

ಪ್ರಾಯೋಗಿಕ ಆವೃತ್ತಿ

ಶ್ರೀಶನೇಶ್ವರಸ್ವಾಮಿ ಜಾತ್ರಾ ಮಹೋತ್ಸವ : ವಿಶೇಷ ಪೂಜೆ

ಮಂಡ್ಯ ತಾಲ್ಲೂಕಿನ ಕೆರಗೋಡು ಹೋಬಳಿಯ ಆಲಕೆರೆ ಗ್ರಾಮದಲ್ಲಿ ಶ್ರೀ ಶನೇಶ್ವರ ದೇವಾಲಯದಲ್ಲಿ ಮಾ.10ರಂದು ವಿಶೇಷ ಪೂಜೆ ಕಾರ್ಯಕ್ರಮಗಳು ನಡೆಯಲಿವೆ.

ಅಂದು ಬೆಳಿಗ್ಗೆ 9 ರಿಂದ ಸಂಜೆ 4.30ವರೆಗೆ ಸ್ವಾಮಿಕಥೆ ಕಾರ್ಯಕ್ರಮ, ಸಂಜೆ 5 ರಿಂದ 6 ಗಂಟೆಯವರೆಗೆ ಸುಗಮ ಸಂಗೀತ ಕಾರ್ಯಕ್ರಮ, ಸಂಜೆ 7.30 ರಿಂದ ಶ್ರೀ ಶನೇಶ್ವರಸ್ವಾಮಿ ಹಾಗೂ ಶ್ರೀ ವೀರಭದ್ರಸ್ವಾಮಿ ಪೂಜಾ ಮೆರವಣಿಗೆ, ಶ್ರೀ ಕಾಶಿವಿಶ್ವನಾಥ, ಆನೆ ಉತ್ಸವ, ಶ್ರೀ ಅಯ್ಯಪ್ಪಸ್ವಾಮಿ ಪಲ್ಲಕ್ಕಿ ಉತ್ಸವ, ವೀರಗಾಸೆ ಕುಣಿತ, ಡೊಳ್ಳು ಕುಣಿತ, ವಾದ್ಯ ಮತ್ತು ಕಾರ್ಯಕ್ರಮಗಳು ನಡೆಯಲಿವೆ.

ಮಾ.11ರಂದು ಶನಿವಾರ ಬೆಳಿಗ್ಗೆ ಅನ್ನಸಂತರ್ಪಣೆ, ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಾನಪದ ಗೀತೆ ಸಂಜೆ 3 ರಿಂದ 4 ರವರೆಗೆ ಕೊಮ್ಮೇರಹಳ್ಳಿ ಕಲಾ ತಂಡದವರಿಂದ ಭಕ್ತಿಗೀತೆ ಕಾರ್ಯಕ್ರಮಗಳು ನಡೆಯಲಿವೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!