Sunday, May 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮಾ.25ರಿಂದ SSLC ಪರೀಕ್ಷೆ: ಲೋಪವಾಗದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ ಜಿಲ್ಲೆಯಲ್ಲಿ ಮಾ.25 ರಿಂದ ಏ.6 ರವರೆಗೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಜರುಗಲಿದ್ದು ಯಾವುದೇ ಲೋಪದೋಷಗಳಾಗದಂತೆ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

2024 ರ ಮಾರ್ಚ್/ಏಪ್ರಿಲ್ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ಬಗ್ಗೆ ನಡೆದ ಪೂರ್ವಭಾವಿ ಸಿದ್ದತೆ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನನುಕೂಲಗಳು ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ. ವಿದ್ಯಾರ್ಥಿಗಳಲ್ಲಿ ಯಾವುದೇ ರೀತಿ ಆತಂಕ,ಭಯ ಆಗದಂತೆ ಪರೀಕ್ಷೆ ಯನ್ನು ನಡೆಸಬೇಕು ಎಂದರು.

ಎಲ್ಲಾ ಪರೀಕ್ಷಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ ಮೂಲಭೂತ ಸೌಕರ್ಯದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಕೊಠಡಿಗಳಲ್ಲಿ ಗಡಿಯಾರ, ಸಿ.ಸಿ.ಟಿ.ವಿ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು ಎಂದರು.

ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಸುತ್ತಳತೆಯಲ್ಲಿ 144 ನೇ ಕಲಂ ಜಾರಿಗೊಳಿಸಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಬೇಕು ಎಂದರು.

ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರೆ ಎಲೆಕ್ಟ್ರನಿಕ್ ಉಪಕರಣಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆಯನ್ನು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ

ಮಾ.1ರಂದು ಕನ್ನಡ ಅರೇಬಿಕ್, ಮಾ.4- ಗಣಿತ, ಶಿಕ್ಷಣ ಶಾಸ್ತ್ರ, ಮಾ.5- ರಾಜ್ಯಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ, ಮಾ. 6- ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್ಸ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್. ಮಾ. 7- ಇತಿಹಾಸ ಹಾಗೂ ಭೌತಶಾಸ್ತ್ರ, ಮಾ.9- ಐಚ್ಛಿಕ ಕನ್ನಡ, ಲೆಕ್ಕ ಶಾಸ್‌ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ, ಮಾ.11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮಾ.13 ಇಂಗ್ಲಿಷ್, ಮಾ.15- ಹಿಂದೂಸ್ತಾನಿ ಸಂಗೀತ, ಮನಃ ಶಾಸ್ತ್ರ, ರಸಾಯನಶಾಸ್‌ರ, ಮೂಲ ಗಣಿತ, ಮಾ.16 ಅರ್ಥಶಾಸ್ತ್ರ, ಮಾ.18- ಭೂಗೋಳ ಶಾಸ್ತ್ರ, ಜೀವ ಶಾಸ್ತ್ರ, ಮಾ.20- ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಮಾ.21-ತಮಿಳು, ತೆಲುಗು,ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್. ಮಾ. 22- ಹಿಂದಿ ಪರೀಕ್ಷೆ ನಡೆಯಲಿದೆ.

ಬ್ಲಾಕ್ ಹಂತದಲ್ಲಿ ಓರ್ವ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ 62 ಪರೀಕ್ಷೆ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಜಿಲ್ಲಾ ಹಂತದಲ್ಲಿ ಮೂರು ಸಂಚಾರಿ ಜಾಗೃತ ದಳವನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದರು.

ಬ್ಲಾಕ್ ಹಂತದಲ್ಲಿ ಪ್ರತಿ ಪರೀಕ್ಷೆ ಕೇಂದ್ರಕ್ಕೆ ಓರ್ವ ಸ್ಥಾನಿಕ ಜಾಗೃತ ಅಧಿಕಾರಿಯನ್ನು ನೇಮಿಸಲಾಗಿದೆ, ಪರೀಕ್ಷಾ ಪ್ರಶ್ನೆ ಪತ್ರಿಕೆಗಳ ಬಂಡಲ್ ಗಳನ್ನು ಪರೀಕ್ಷಾ ಮಂಡಳಿಯ ನಿಯಮದ ಪ್ರಕಾರ ಬ್ಲಾಕ್ ಹಂತದಲ್ಲಿ ಉಪ ನೆಯಲ್ಲಿ ಠೇವಣಿ ಮಾಡಲು ಕ್ರಮ ವಹಿಸಬೇಕು.

ವಿಷಯ ಶಿಕ್ಷಕರಲ್ಲದವರನ್ನು ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಕ ಮಾಡಿಕೊಳ್ಳಬೇಕು, ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ನೆಲಮಹಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಳ್ಳಬೇಕು, ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ ಎಂದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಒಂದು ವೇಳೆ ವಿದ್ಯಾರ್ಥಿಗಳು ತಂದಲ್ಲಿ ಅವುಗಳನ್ನು ಸಂರಕ್ಷಿಸಿಡಲು ಪರೀಕ್ಷಾ ಕೇಂದ್ರಗಳಿಗೆ ಓರ್ವ ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ಮಾಡಲಾಗಿದೆ ಎಂದರು.

ಐದು ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ಸಿಸಿಟಿವಿ ವೀಕ್ಷಣೆಗಾಗಿ ಓರ್ವ ಸಿಬ್ಬಂದಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ನೇಮಕ ಮಾಡಿಕೊಳ್ಳಬೇಕು ಎಂದರು

ಎಲ್ಲ ಬ್ಲಾಕ್ ಗಳಲ್ಲಿ ಪ್ರಶ್ನೆ ಪತ್ರಿಕೆಗಳ ಬಂಡಲ್ ಗಳನ್ನು ಪರೀಕ್ಷಾ ಕೇಂದ್ರಗಳಿಗೆ ರವಾನಿಸಲು ಮಾರ್ಗ ಅಧಿಕಾರಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಸದರಿ ಮಾರ್ಗ ಅಧಿಕಾರಿಗಳಿಗೆ ಬಿಗಿ ಬಂದೋಬಸ್ತ್ ಗಾಗಿ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಡಯಟ್ ಪ್ರಾಂಶುಪಾಲ ರಾಮು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್ ಶಿವರಾಮೇಗೌಡ ಹಾಗೂ ಇನ್ನಿತರ ಶಿಕ್ಷಕರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!