Friday, November 20, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | ನಾಳೆಯಿಂದ ಎಸೆಸ್ಸೆಲ್ಸಿ ಪರೀಕ್ಷೆ ಸಕಲ ಸಿದ್ಧತೆ : ಬಿಇಓ ತಿಮ್ಮೇಗೌಡ.

೨೦೨೪-೨೫ ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಆರಂಭವಾಗುತ್ತಿದ್ದು -೦೧ ನೇ ಪರೀಕ್ಷೆಯು ಕರ್ನಾಟಕ ರಾಜ್ಯದಾಧ್ಯಂತ ಏಕ ಕಾಲದಲ್ಲಿ ಮಾರ್ಚ್-21 ರಿಂದ ಆರಂಭಗೊಳ್ಳುತ್ತಿದೆ. (ದಿನಾಂಕ: ೨೧-೦೩-೨೦೨೫ ರಿಂದ ಏಪ್ರಿಲ್ ೦೪ ರವರೆಗೆ) ತಾಲ್ಲೂಕಿನ ೫೯ ಪ್ರೌಢ ಶಾಲೆಗಳ ಒಟ್ಟು ೨,೭೭೪ ವಿದ್ಯಾರ್ಥಿಗಳು
ತಾಲ್ಲೂಕಿನ ೬ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮೇಗೌಡ ತಿಳಿಸಿದ್ದಾರೆ.

ಕೃಷ್ಣರಾಜಪೇಟೆ ಪಟ್ಟಣದ ಕೆಪಿಎಸ್ ಶಾಲೆ, ಹೊಸಹೊಳಲು ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಅಕ್ಕಿಹೆಬ್ಬಾಳು, ಬೂಕನಕೆರೆ, ಕಿಕ್ಕೇರಿ ಹಾಗೂ ಸಂತೇಬಾಚಹಳ್ಳಿ ಹೋಬಳಿ ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ೧೪೯೨ ಬಾಲಕರು ಹಾಗೂ ೧೨೮೧ ಬಾಲಕಿಯರು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಸರ್ಕಾರಿ ಪ್ರೌಢ ಶಾಲೆಗಳ ೧೭೨೧ ವಿದ್ಯಾರ್ಥಿಗಳು, ಅನುದಾನಿತ ಪ್ರೌಢ ಶಾಲೆಗಳ ೪೦೬, ಅನುದಾನ ರಹಿತ ಖಾಸಗಿ ಶಾಲೆಗಳ ೬೪೧ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಬರೆಯುತ್ತಿದ್ದಾರೆ. ೨೭೭೪ ವಿದ್ಯಾರ್ತಿಗಳಲ್ಲಿ ೨೬೭೯ ವಿದ್ಯಾರ್ಥಿಗಳು ಹೊಸದಾಗಿ
ಪರೀಕ್ಷೆಗೆ ಹಾಜರಾಗುತ್ತಿದ್ದು, ೯೫ ಪುನರಾವರ್ತಿತ ಹಾಗೂ ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ

ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಯಾವುದೇ ಸೂಕ್ಷ್ಮ, ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿರುವುದಿಲ್ಲ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಟಿವಿ ಕಣ್ಗಾಲಿರುತ್ತದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಒಬ್ಬರು ಸ್ಥಾನಿಕ ಜಾಗೃತದಳ ಸಿಬ್ಬಂಧಿ ಹಾಗೂ ತಾಲ್ಲೂಕು ಹಂತದಲ್ಲಿ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಿಚಕ್ಷಣ ದಳವನ್ನು ರಚಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಾ ೨೦೦ ಮೀಟರ್ ಪ್ರದೇಶವನ್ನು ನಿಷೇಧಿಶ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಮಗಡಿಗಳನ್ನು ಮುಚ್ಚುಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಭದ್ರತೆಗಾಗಿ ಪೊಲೀಸ್ ಸಿಬ್ಬಂಧಿಯನ್ನು ಹಾಗೂ ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಠಿಯಿಂದ
ಆರೋಗ್ಯ ಶುಶ್ರೂಷಕರನ್ನು ನಿಯೋಜಿಸಲಾಗಿದೆ. ವಿದ್ಯಾಥಿಗಳು ಪರೀಕ್ಷಾ ಕೇಂದ್ರದ ಒಳಗೆ ಡಿಜಿಟಲ್ ಸ್ಮಾರ್ಟ್ ಕೈಗಡಿಯಾರ ಅಥವಾ ಯಾವುದೇ ರೀತಿಯ ಉಪಕರಣಗಳನ್ನು ತರುವುದನ್ನು ನಿಷೇದಿಸಲಾಗಿದೆ.

ತಾಲ್ಲೂಕಿನ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯದ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಪೀಠೋಪಕರಣದ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಕಳೆದ ಬಾರಿಯ ಪರೀಕ್ಷೆಯಂತೆ ಈ ಬಾರಿಯೂ ಕೂಡ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಅಭಿಮುಖವಾಗಿ ಕುಳಿತು ಪರೀಕ್ಷೆ ಬರೆಯಲಿದ್ದಾರೆ. ಈ ವರ್ಷದ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಶಿಕ್ಷಣ ಇಲಾಖೆಯು ಸರ್ವ ಸಿದ್ಧತೆ
ಮಾಡಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ನೋಡಲ್ ಅಧಿಕಾರಿ ಹಾಗೂ ಶಿಕ್ಷಣ ಸಂಯೋಜಕ ಬಿ.ಕೆ.ಹರೀಶ್ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ