Thursday, September 19, 2024

ಪ್ರಾಯೋಗಿಕ ಆವೃತ್ತಿ

ಜುಲೈ 2 ರಂದು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಎಸ್.ಡಿ.ಜಯರಾಮ್ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಸಹಯೋಗದಲ್ಲಿ ಕೆಂಪೇಗೌಡ ಜಯಂತಿ ಅಂಗವಾಗಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದೆಂದು ಎಸ್.ಡಿ.ಜಯರಾಮ್ ಸಮಗ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಅಶೋಕ್ ಜಯರಾಂ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಜುಲೈ 2 ರಂದು ಬೆಳಗ್ಗೆ 11ಗಂಟೆಗೆ ಮಂಡ್ಯ ನಗರದ ಕರ್ನಾಟಕ ಸಂಘದ ಆವರಣದಲ್ಲಿರುವ ಕೆ.ವಿ. ಶಂಕರಗೌಡ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಸಂಸದೆ ಸುಮಲತಾ ಅಂಬರೀಶ್ ಉದ್ಘಾಟಿಸಲಿದ್ದು, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶಗೌಡ, ವಿಲ್‌ಕಾರ್ಟ್ ಸೆಲ್ಯೂಸನ್ ಪ್ರೈವೇಟ್ ಲಿಮಿಟೆಡ್ ಸ್ಥಾಪಕ ಪ್ರಸನ್ನರವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

2021-2022 ನೇ ಸಾಲಿನ ಎಸ್‌ಎಸ್‌ಎಲ್‌ಸಿಯಲ್ಲಿ 600ಕ್ಕೂ ಹೆಚ್ಚು ಮತ್ತು ಪಿಯುಸಿಯಲ್ಲಿ 55೦ಕ್ಕೂ ಹೆಚ್ಚು ಅಂಕ ಗಳಿಸಿದ ಸರ್ಕಾರಿ ಶಾಲೆ ಮತ್ತು ಕಾಲೇಜಿನ 100 ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂ. ನಗದು ಬಹುಮಾನವನ್ನು ನೀಡಲು ನಿರ್ಧರಿಸಿದ್ದೇವೆ.

ಈಗಾಗಲೇ ಆರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ಸಂಬಂಧಪಟ್ಟ ಇಲಾಖೆಯಲ್ಲಿ ಮಾಹಿತಿ ಪಡೆದು ಸಿದ್ಧಪಡಿಸಲಾಗಿದೆ. ಒಂದು ವೇಳೆ ಅರ್ಹ ವಿದ್ಯಾರ್ಥಿಗಳ ಹೆಸರು ಕೈ ತಪ್ಪಿದ್ದಲ್ಲಿ ಕಾರ್ಯಕ್ರಮದ ಅರ್ಧ ಗಂಟೆ ಮುಂಚಿತವಾಗಿ ಬಂದು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಇಂಡಿಯಾ ಫಾರ್ ಐಎಎಸ್ ಸಂಸ್ಥೆಯ ಶ್ರೀನಿವಾಸ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ಉದ್ದೇಶವಿದೆ.ಮಂಡ್ಯದ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶದಿಂದ 100 ಸರ್ಕಾರಿ ಶಾಲೆಯ ಮಕ್ಕಳನ್ನು ಆಯ್ಕೆ ಮಾಡುತ್ತಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಬೇಲೂರು ಸೋಮಶೇಖರ್, ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷ ಕಾರಸವಾಡಿ ಮಹದೇವು, ಕಾಳೇಗೌಡ,ಗಾಂಧಿನಗರ ಚಂದ್ರು,ಆನಂದ್ ಹುಲಿವಾನ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!