Friday, June 21, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ: ನರೇಂದ್ರಸ್ವಾಮಿ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾಮಣೀಗೌಡ (ಸ್ಟಾರ್ ಚಂದ್ರುಈ ಅವರ ಗೆಲುವು ನಿಶ್ಚಿತ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಮಳವಳ್ಳಿ ತಾಲ್ಲೂಕಿನ ಪೂರಿಗಾಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ಸರದಿ ಸಾಲಿನಲ್ಲಿ ನಿಂತು ಮತಚಲಾವಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಉತ್ಸಾಹ ಹಾಗೂ ಸಾರ್ವಜನಿಕರ ಉತ್ತಮ ಸ್ಪಂದನೆಯನ್ನು ನೋಡಿದರೇ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿಯಲಿದ್ದು, ಮೊದಲನೆ ಹಂತದ ಚುನಾವಣೆಯಲ್ಲಿ 12 ಸ್ಥಾನ ಹಾಗೂ ಎರಡನೇ ಹಂತದ ಚುನಾವಣೆಯಲ್ಲಿ 8 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವದ ಹಬ್ಬದಲ್ಲಿ ಮಳವಳ್ಳಿ ಕ್ಷೇತ್ರದ ಮತದಾರರು ಪಾಲ್ಗೊಂಡು ತಮ್ಮ ಹಕ್ಕನ್ನು ಚಲಾಯಿಸಿದ ಎಲ್ಲಾ ಮತದಾರರಿಗೂ ಅಭಿನಂದನೆ ಸಲ್ಲಿಸುತ್ತೇನೆ, ಕ್ಷೇತ್ರದಲ್ಲಿ ಸಣ್ಣಪುಟ್ಟ ಸಮಸ್ಯೆಗಳನ್ನು ಹೊರತು ಪಡಿಸಿ ಶಾಂತಿಯುತವಾಗಿ ಮತದಾನವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!