Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ: ಸ್ಟಾರ್ ಚಂದ್ರು

ಮಂಡ್ಯ ಜಿಲ್ಲೆಯಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು ಇತರೆ ಲೋಕಸಭಾ ಕ್ಷೇತ್ರಗಳಿಗೆ ಮಾದರಿಯಾಗಬೇಕು. ರಾಜಕೀಯವಾಗಿ ಮಾತ್ರವಲ್ಲ, ಅಭಿವೃದ್ಧಿ ವಿಚಾರದಲ್ಲೂ ಕೂಡ ಮಂಡ್ಯ ಹೆಸರು ಇಂಡಿಯಾದಾದ್ಯಂತ ಕೇಳಬೇಕು. ಮಂಡ್ಯವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಹೇಳಿದರು.

ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಂಡ್ಯ ಜಿಲ್ಲೆ ಪ್ರಾಕೃತಿಕವಾಗಿ, ರಾಜಕೀಯವಾಗಿ ಸಾಕಷ್ಟು ಹೆಸರುವಾಸಿ. ಜಿಲ್ಲೆಯಲ್ಲಿ ಕೃಷಿಯೇ ಜೀವಾಳ. ಈ ಭಾಗದ ರೈತರ ಕಲ್ಯಾಣಕ್ಕೆ ಕಂಕಣಬದ್ಧನಾಗಿದ್ದೇನೆ. ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿತಾಣಗಳಿದ್ದು ಅವುಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಿಕೊಡಬೇಕೆಂಬ ಕನಸು ಹೊಂದಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಬಡವರ ದೀನ ದಲಿತರ ಪರ

ಕಾಂಗ್ರೆಸ್ ಪಕ್ಷ ಬಡವರ ದೀನ ದಲಿತರ ಪರ. ಎಲ್ಲಾ ವರ್ಗದವರನ್ನು ಒಟ್ಟಿಗೆ ಕೊಂಡೊಯ್ಯುವ ಪಕ್ಷ. ಉದ್ಯೋಗ ಸೃಷ್ಟಿ, ಸಾಮಾಜಿಕ ನ್ಯಾಯ, ಆರೋಗ್ಯ ಸೇವೆ ಸೇರಿದಂತೆ ರಾಷ್ಟ್ರದ ಜನತೆಯ ಕಲ್ಯಾಣ ಬಯಸಿ  25 ಭರವಸೆಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ. ಮತದಾರರು ಪ್ರಜ್ಞಾವಂತರಿದ್ದಾರೆ. ಕಾಂಗ್ರೆಸ್ ನ ಜನಪರ ಕಾರ್ಯಕ್ರಮಗಳಿಗೆ ಮನ್ನಣೆ ನೀಡಲಿದ್ದು ನನ್ನನ್ನು ಆಶೀರ್ವದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೋಡ್ ಶೋ

ಇಂದು ಬೆಳಿಗ್ಹೆಯಿಂದಲೇ ಸ್ಟಾರ್ ಚಂದ್ರು ಅವರು ಮದ್ದೂರು ವಿಧಾನಸಭಾ ಕ್ಷೇತ್ರದ ಹಲವು ಗ್ರಾಮಗಳಿಗೆ ತೆರಳಿ ರೋಡ್ ಶೋ ಮೂಲಕ ಮತ ಯಾಚಿಸಿದರು.

ಗೊಲ್ಲರದೊಡ್ಡಿಯ ಜುಂಜಪ್ಪ ದೇವರಿಗೆ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದ ಅವರು ತರುವಾಯ ಮಲ್ಲನಕುಪ್ಪೆ, ಹೂತಗೆರೆ, ಕೆಸ್ತೂರು, ಆತಗೂರು, ಕದಲೂರು, ಹೆಮ್ಮನಹಳ್ಳಿ, ನಿಡಘಟ್ಟ, ಆಲೂರು, ಹೊನ್ನಲಗೆರೆ, ಬೆಳ್ಳೂರು, ಕೊಳಗೆರೆ, ಗೆಜ್ಜಲಗೆರೆ, ವಳಗೆರಹಳ್ಳಿ, ಹೊಸಕೆರೆ, ನಿಲುವಾಗಿಲು, ಬೆಸಗರಹಳ್ಳಿ, ಚಾಮನಹಳ್ಳಿ ಸೇರಿದಂತೆ ಮದ್ದೂರು ತಾಲೂಕಿನಾದ್ಯಂತ ಮತಯಾಚಿಸಿದರು.

ಮದ್ದೂರು ಶಾಸಕ ಉದಯ್, ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕದಲೂರು ರಾಮಕೃಷ್ಣ, ಶಿವಲಿಂಗೇಗೌಡ ಕೆಪಿಸಿಸಿ ವಕ್ತಾರ ತೈಲೂರು ಸತ್ಯಾನಂದ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಜೊತೆಯಲ್ಲಿದ್ದರು.

ಬಿರುಬಿಸಿಲಿನಲ್ಲೂ ಜನಸ್ತೋಮ

ಹಳ್ಳಿಗಳಲ್ಲಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ ಎಲ್ಲೆಡೆ ನೆರೆದಿದ್ದ ಜನಸ್ತೋಮ ಕಂಡು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಗೊಂಡಿತ್ತು. ಕಾರ್ಯಕರ್ತರು ಅಭ್ಯರ್ಥಿ ಮೇಲೆ ಹೂ ಮಳೆಯನ್ನೇ ಸುರಿಸಿದರು. ಸುಡು ಬಿಸಿಲನ್ನು ಲೆಕ್ಕಿಸದೇ ನೂರ ಆರು ಸಂಖ್ಯೆಯಲ್ಲಿ ನೆರೆದಿದ್ದ ಜನರು ಅಭ್ಯರ್ಥಿಯನ್ನು ಕಂಡು ಕೈ ಕುಲುಕಿ ಬೆಂಬಲ ಸೂಚಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ