ಮಂಡ್ಯ ಜಿಲ್ಲೆಯಾದ್ಯಂತ ಕಾನೂನು ಬಾಹಿರವಾಗಿ ಇಸ್ಪೀಟ್, ಜೂಜು, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ ಸೇರಿದಂತೆ ಇತರೆ ಮಾದಕ ವಸ್ತುಗಳ ಮಾರಾಟ ಮತ್ತು ಮದ್ಯ ಮಾರಾಟ ಮಾಡುವವರ ಮಾಹಿತಿ ನೀಡುವುದಕ್ಕಾಗಿ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯು ಸಹಾಯವಾಣಿ ಪ್ರಾರಂಭಿಸಿದೆ.
ಸಾರ್ವಜನಿಕರು (ಹೆಲ್ಪ್ ಲೈನ್) ಸಹಾಯವಾಣಿ – 08232-227100 ಗೆ ಕರೆ ಮಾಡಿ ಅಕ್ರಮ ದಂಧೆಗಳ ವಿರುದ್ದ ಮಾಹಿತಿ ನೀಡಬಹುದು. ಮಾಹಿತಿ ನೀಡುವವರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು. ಈ ಮೂಲಕ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಸಹಕರಿಸುವಂತೆ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಇತ್ತೀಚೆಗೆ ಬೆಟ್ಟಿಂಗ್ ದಂಧೆಯಿಂದ ಬೂದನೂರಿನ ಯುವಕನೊಬ್ಬ ಬೆಟ್ಟಿಂಗ್ ದಂಧೆಗೆ ಸಿಲುಕಿ ಕೋಟ್ಯಾಂತರ ರೂಪಾಯಿ ಸಾಲ ಮಾಡಿಕೊಂಡು ರೈಲಿಗೆ ತಲೆಗಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ, ಈ ಹಿನ್ನೆಲೆಯಲ್ಲಿ ಮಂಡ್ಯ ವಿವಿಧ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದು, 15 ದಿನಗಳಲ್ಲಿ ಬೆಟ್ಟಿಂಗ್ ದಂಧೆ ನಿಯಂತ್ರಿಸಬೇಕೆಂದು ಗಡುವು ನೀಡಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಸಹಾಯವಾಣಿ ಆರಂಭಿಸಿದೆ.




