Thursday, September 19, 2024

ಪ್ರಾಯೋಗಿಕ ಆವೃತ್ತಿ

ನೇರಪಾವತಿ – ಖಾಯಂಗೆ ಆಗ್ರಹ : ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಮುಷ್ಕರ ಆರಂಭ

ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿಗೊಳಪಡಿಸಿ ಹಂತ ಹಂತವಾಗಿ ಖಾಯಂಗೊಳಿಸುವಂತೆ ಆಗ್ರಹಿಸಿ ಇಂದಿನಿಂದ (ಫೆ.1) ಕಸ ಸಾಗಿಸುವ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಕೀನರ್ಸ್, ಹಲರ್ಸ್‌, ಒಳಚರಂಡಿ ಕಾರ್ಮಿಕರು ಸೇರಿದಂತೆ ನಗರಸಭೆಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಮಂಡ್ಯ ನಗರಸಭೆ ಆವರಣದಲ್ಲಿ ಅನಿರ್ದಿಷ್ಟಾವದಿ ಮುಷ್ಕರ ಆರಂಭಿಸಿದರು.

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ಸರಕಾರ ಪೌರ ಕಾರ್ಮಿಕರೊಟ್ಟಿಗೆ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್ ಕ್ಲೀನರ್ಸ್ ಹೆಲ್ಟರ್ಸ್ ಗಳು, ಡಾಟ ಆಪರೇಟರುಗಳು ಸ್ಯಾನಿಟರಿ ಸೂಪರ್ ವೈಸರುಗಳು ಸೇರಿದಂತೆ 15ಸಾವಿರ ಕ್ಕೂ ಹೆಚ್ಚು ನೌಕರರನ್ನು ಗುತ್ತಿಗೆಯಲ್ಲಿ ಉಳಿಸಿ ತಾರತಮ್ಯ ಎಸಗಿದ್ದು ಹೊರಗುತ್ತಿಗೆ ನೌಕರರನ್ನು ನೇರಪಾವತಿ ಹಾಗೂ ಖಾಯಂಗಾಗಿ ಇಂದಿನಿಂದ ಅನಿರ್ದಿಷ್ಟವಧಿ ಧರಣಿ ಆರಂಭಿಸಿದ್ದಾರೆ.

ನಗರಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. 2017ರಲ್ಲಿ ಪೌರಕಾರ್ಮಿಕರ ನೇಮಕಾತಿಗೊಳಿಸಿದಾಗಲೂ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಉಳಿಸಲಾಯಿತು. ಈಗಲೂ ಸಹ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಮುಂದುವರಿಸುವ ಸರಕಾರದ ನೀತಿ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ ಎಂದು ನೌಕರರು ಕಿಡಿಕಾರಿದ್ದು, ಈ ಕುರಿತು ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಸರಕಾರ ಆಗಿರುವ ಲೋಪವನ್ನು ಸರಿಪಡಿಸಿ ಹೊರಗುತ್ತಿಗೆ ನೌಕರರನ್ನು ಪೌರ ಕಾರ್ಮಿಕರ -ಮಾದರಿಯಲ್ಲಿ ನೇರ ಪಾವತಿಗೊಳಪಡಿಸಿ ಹಂತ ಹಂತವಾಗಿ ಖಾಯಂಗೊಳಿಸಬೇಕು. ರಾಜ್ಯದ 30 ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದು ಕುಡಿಯುವ ನೀರು ಹಾಗೂ ಕಸ ವಿಲೇವಾರಿಯಲ್ಲಿ ನಾಗರೀಕರಿಗೆ ಆಗುವ ಅನಾನುಕೂಲಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ. ನಾಗಕರು ಸಹ ನಮ್ಮ ಹೋರಾಟದಲ್ಲಿ ಕೈ ಜೋಡಿಸುವಂತೆ ಮನವಿ ಮಾಡಿದರು. ಮುಷ್ಕರದಲ್ಲಿ ನಗರಸಭೆ ಅಧ್ಯಕ್ಷ ಹೆಚ್.ಎಸ್.ಮಂಜು ಭಾಗವಹಿಸಿ ಹೊರಗುತ್ತಿಗೆ ನೌಕರರ ಹೋರಾಟಕ್ಕೆ ಬೆಂಬಲ ನೀಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!