ಕಾವೇರಿ ನೀರು ನಿರ್ವಾಹಣ ಪ್ರಾಧಿಕಾರ ತಮಿಳು ನಾಡಿಗೆ ನೀರು ಬಿಡಬೇಕೆಂದು ಆದೇಶಿಸಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಕಾವೇರಿ ಹೋರಾಟ ತಾರಕ್ಕೇರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ.
ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯು ಗುರುವಾರದಿಂದ ಮಂಡ್ಯನಗರದ ಸರ್ ಎಂ ವಿ ಪ್ರತಿಮೆ ಮುಂಭಾಗದಲ್ಲಿ ಧರಣಿ ಆರಂಭಿಸಿ, ಜಿಲ್ಲೆಯ ಜನತೆ ಪಕ್ಷಾತೀತವಾಗಿ ಬೆಂಬಲ ಸೂಚಿಸಿ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಎಂದು ಆದೇಶ ಮಾಡಿರುವುದು ಅವಜ್ಞಾನಿಕ ರಾಜ್ಯ ಸರ್ಕಾರ ರೈತರ ಹಿತದೃಷ್ಟಿಯಿಂದ, ಅಣೆಕಟ್ಟುಗಳಲ್ಲಿ ನೀರು ಕಡಿಮೆ ಇರುವುದರಿಂದ ಯಾವುದೇ ಕಾರಣಕ್ಕೂ ನೀರು ಬಿಡುಗಡೆ ಮಾಡಬಾರದು ಒತ್ತಾಯ ಮಾಡಿದ್ದೆವು. ಆದರೂ ಸಹ ತಮಿಳುನಾಡಿಗೆ ನೀರು ಬಿಟ್ಟಿರುವುದು ಸರಿಯಲ್ಲ ಹೋರಾಟಗಾರರು ಕಿಡಿಕಾರಿದರು.
ಹೋರಾಟದಲ್ಲಿ ಮುಖಂಡರಾದ ಮಾಜಿ ಸಚಿವ ಎಂ ಎಸ್. ಆತ್ಮಾನಂದ, ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ರೈತ ಮುಖಂಡರಾದ ಕೆ.ಬೋರಯ್ಯ, ಸುನಂದ ಜಯರಾಂ, ಬೇಕ್ರಿ ರಮೇಶ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.




