Friday, September 20, 2024

ಪ್ರಾಯೋಗಿಕ ಆವೃತ್ತಿ

ರಾಜ್ಯದ 20 ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ

ಕರ್ನಾಟಕ ರಾಜ್ಯದ 20 ಜಿಲ್ಲೆಗಳಲ್ಲಿ ಇನ್ನೂ 2 ದಿನ ಮಳೆ ಮುಂದುವರೆಯಲಿದ್ದು, ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ಮಹಾನಗರ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬೆಳಗಾವಿ, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ.

ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.  ರಾಜ್ಯದ ಸುಮಾರು 20 ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಕರಾವಳಿಯ 3 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಇನ್ನೂ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಶಿವಮೊಗ್ಗ, ಬೀದರ್, ಕಲಬುರ್ಗಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳು ಕಳೆದ ವಾರ ಮಳೆಯ ಕೊರತೆಯನ್ನು ಎದುರಿಸಿದ್ದವು. ಆದರೆ, ಗದಗ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿತ್ತು.

ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ಮಳೆ, ಚಳಿಯ ವಾತಾವರಣವಿತ್ತು. ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಯಾವ ರಾಜ್ಯಗಳಲ್ಲಿ ಮಳೆ 

ಇಂದು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಛತ್ತೀಸ್‌ಗಢ, ಪುದುಚೇರಿ, ತಮಿಳುನಾಡುಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಒಡಿಶಾ, ಉತ್ತರಾಖಂಡ, ಹರಿಯಾಣ, ಚಂಡೀಗಢ, ದೆಹಲಿ, ಕೊಂಕಣ, ಗೋವಾ, ಆಂಧ್ರಪ್ರದೇಶ, ಯಾನಂ, ತೆಲಂಗಾಣ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದಂತೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಪಂಜಾಬ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಪರ‍್ವ ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!