Sunday, May 19, 2024

ಪ್ರಾಯೋಗಿಕ ಆವೃತ್ತಿ

ಜನವರಿಯಲ್ಲಿ ರಾಜ್ಯಮಟ್ಟದ ಉದ್ಯೋಗ ಮೇಳ; ಆಯೋಜನೆಗೆ ತಂಡ ರಚಿಸಿದ ಸಿಎಂ ಸಿದ್ದರಾಮಯ್ಯ

ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ರಾಜ್ಯ ಸರ್ಕಾರವು ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ಧಾರೆ.

ಮೇಳದ ಆಯೋಜನೆಗಾಗಿ ಸಚಿವರಾದ ಎಂ.ಬಿ.ಪಾಟೀಲ, ಪ್ರಿಯಾಂಕ್‌ ಖರ್ಗೆ, ಡಾ. ಶರಣಪ್ರಕಾಶ ಪಾಟೀಲ, ಡಾ. ಎಂ.ಸಿ. ಸುಧಾಕರ್‌, ಬಿ. ನಾಗೇಂದ್ರ, ಸಂತೋಷ್‌ ಲಾಡ್‌ ಹಾಗೂ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ ಸಚಿವರ ತಂಡ ರಚಿಸಲು ಸಿಎಂ ಸೂಚಿಸಿದ್ದಾರೆ.

“>

ಉದ್ಯೋಗ ಮೇಳವನ್ನು ವ್ಯವಸ್ಥಿತವಾಗಿ ಆಯೋಜಿಸುವುದು ಸಮಿತಿಯ ಪ್ರಮುಖ ಕಾರ್ಯವಾಗಿರಲಿದೆ. ಸಚಿವರ ತಂಡವು ಉದ್ಯೋಗದಾತ ಕಂಪನಿಯವರೊಂದಿಗೆ ಸಭೆ ನಡೆಸಿ ಚರ್ಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮವಹಿಸಲಿದೆ. ಜೊತೆಗೆ ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಶಿಫಾರಸ್ಸು ಮಾಡುವಂತೆ ಮತ್ತು ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತು ಪರಿಶೀಲನೆ ನಡೆಸಲಿದೆ ಎಂದು ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!