Friday, November 20, 2026

ಪ್ರಾಯೋಗಿಕ ಆವೃತ್ತಿ

ರಾಜ್ಯಮಟ್ಟದ ಕಬಡ್ಡಿ ಸ್ಪರ್ಧೆಗೆ ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿಗಳು ಆಯ್ಕೆ

ನಾಗಮಂಗಲ ತಾಲೂಕಿನ ಕೋಟೆಬೆಟ್ಟ ಕ್ಷೇತ್ರದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳು ೧೪ ರ ವಯೋಮಾನದ ಬಾಲಕರ ಕಬಡ್ಡಿ ಸ್ಪರ್ಧೆಯಲ್ಲಿ ಮೈಸೂರು ವಿಭಾಗ ಮಟ್ಟದಲ್ಲಿ ಜಯಶೀಲರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ರಾಮ ಕುಂಜಾದ ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ೧೪ರ ವಯೋಮಾನದ ಕಬಡ್ಡಿ ಪಂದ್ಯಾವಳಿಯಲ್ಲಿ ಮಂಡ್ಯ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕೋಟೆಬೆಟ್ಟ ಮೊರಾರ್ಜಿ ದೇಸಾಯಿ ಶಾಲೆ ವಿದ್ಯಾರ್ಥಿಗಳು ಗೆಲುವು ಸಾಧಿಸಿ ಮಂಡ್ಯ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಸ್ಪರ್ಧಾಳುಗಳಾದ ಗಗನ್ ಗೌಡ ಎಸ್ ಆರ್ ಯಶ್ವಂತ್ ಧನುಷ್ ಸಿ ಕೆ ಮಹೇಶ ಕೆ ಎಂ ಕಿಶೋರ ಬಿ ಎಂ ಪವನ್ ಪ್ರಶಾಂತ್ ಹಾಗೂ ತರಬೇತುದಾರರಾದ ದೈಹಿಕ ಶಿಕ್ಷಣ ಶಿಕ್ಷಕ ನಾಗರಾಜ್ ಬಿ ಬಿ ರವರನ್ನು ಶಾಲೆಯ ಪ್ರಾಂಶುಪಾಲರಾದ ಟಿ ಕೆ ಸ್ವಾಮಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ