Friday, November 20, 2026

ಪ್ರಾಯೋಗಿಕ ಆವೃತ್ತಿ

ದೈಹಿಕ ಶಿಕ್ಷಣ ಶಿಕ್ಷಕರ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಮಂಡ್ಯದ ಪಿಇಟಿ ಕ್ರೀಡಾಂಗಣದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ 2 ದಿನಗಳ ಕಾಲ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಪ್ರಥಮ ಸ್ಥಾನ ಪಡೆದ ದೈಹಿಕ ಶಿಕ್ಷಣ ಶಿಕ್ಷಕರ ತಂಡವು ರಾಜ್ಯ ಜಾನಪದ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದೆ.

ದೈಹಿಕ ಶಿಕ್ಷಣ ಶಿಕ್ಷಕಿ ಶೃತಿನಾಯಕ್ ಮತ್ತು ತಂಡವರು ಜಾನಪದ ನೃತ್ಯವನ್ನು ಜಿಲ್ಲಾ ಮಟ್ಟದ ನೌಕರರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ತೀರ್ಪುಗಾರರ ಸಮಿತಿಯಿಂದ ರಾಜ್ಯ ಮಟ್ಟದ ಜಾನಪದ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕೆ.ಜೆ.ರತ್ನ, ಎಂ.ಕೆ.ಸುಮತಿ, ಒಡಿಸ್ಸ ಕ್ಲಾಸಿಕಲ್ ನೃತ್ಯ ವಿಭಾಗದಲ್ಲಿ ದ್ವಿತೀಯ ಬಹುಮಾನ ಮತ್ತು ಲಘು ಶಾಸ್ತ್ರೀಯ ಸಂಗೀತ ವಿಭಾಗದಲ್ಲಿ ದ್ವಿತೀಯ ಬಹುಮಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಹಿಳಾ ತಂಡವು ಜಾನಪದ ಡೊಳ್ಳು ಕುಣಿತ ವಿಭಾಗದಲ್ಲಿ ಕೆ.ಜೆ.ರತ್ನ, ಸುಮತಿ, ಸೌಮ್ಯಲತಾ, ಶ್ರೀದೇವಿ, ಪುಷ್ಪಲತಾ, ಜಸ್ಮಿ, ಎನ್. ಸಿದ್ದರಾಜು, ಡಿ.ನಾಗರಾಜು, ಕೆ.ನಾಗರಾಜು ಇವರು ಉತ್ತಮ ಪ್ರದರ್ಶನ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಶಂಭೂಗೌಡ ಮತ್ತು ಪದಾಧಿಕಾರಿಗಳು ಬಹುಮಾನ ವಿತರಿಸಿ, ಅಭಿನಂದಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ