ನಾಗಮಂಗಲ ತಾಲ್ಲೂಕಿನ ಮುದ್ದಲಿಂಗನಕೊಪ್ಪಲು ಗ್ರಾಮದ ಶ್ರೀ ದಂಡಿನದೇವಿ (ಲಕ್ಷ್ಮಿದೇವಿ) ದೇವಸ್ಥಾನದ ಬಾಗಿಲನ್ನು ಮುರಿದು ಒಂದು ಚಿನ್ನದ ತಾಳಿ ಮತ್ತು ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುವ ದರೋಡೆಕೋರರ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಆರೋಪಿಗಳ ಪತ್ತೆಗಾಗಿ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಸತೀಶ್ ಮತ್ತು ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.
ದಿನಾಂಕ 12.07.2022 ರಂದು ನಾಗಮಂಗಲ ತಾಲ್ಲೂಕಿನ ಕರಿಕ್ಯಾತನಹಳ್ಳಿ ಬಳಿ ಪ್ರಕರಣದ ಒಬ್ಬ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರ ಮಾಡಿ ದಸ್ತಗಿರಿ ಮಾಡಲಾಗಿರುತ್ತದೆ.
ಆರೋಪಿಗಳು ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ 03 ಪ್ರಕರಣಗಳು, ಬಿಂಡಿಗನವಿಲೆ ಪೊಲೀಸ್ ಠಾಣೆಯ 01 ಪ್ರಕರಣ ಮತ್ತು ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯ 01 ಪ್ರಕರಣ ಸೇರಿದಂತೆ ಒಟ್ಟು 05 ದೇವಸ್ಥಾನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿರುತ್ತದೆ.
ಸದರಿ ಆರೋಪಿಗಳಿಂದ 125 ಗ್ರಾಂ ಚಿನ್ನದ ಒಡವೆಗಳು ಹಾಗೂ ಸುಮಾರು 3 ಕೆ.ಜಿ. ಬೆಳ್ಳಿ ಒಡವೆಗಳನ್ನು ವಶಪಡಿಸಿಕೊಂಡಿದ್ದು, ಒಟ್ಟು 8 ಲಕ್ಷದ ಚಿನ್ನ ಮತ್ತು ಬೆಳ್ಳಿ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೃತ್ಯಕ್ಕೆ ಉಪಯೋಗಿಸಿದ ಮೋಟಾರ್ ಸೈಕಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಶ್ಲಾಘಿಸಿದ್ದಾರೆ.