Friday, September 20, 2024

ಪ್ರಾಯೋಗಿಕ ಆವೃತ್ತಿ

ಕಾವೇರಿ ಹೋರಾಟ| ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ

ಕನ್ನಂಬಾಡಿ ಕಟ್ಟೆಯಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸೇನೆ ಕಾರ್ಯಕರ್ತರು ತಲೆ ಮೇಲೆ ಕಲ್ಲು ಹೊತ್ತು ಮಂಡ್ಯದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಮಂಡ್ಯದ ಸಂಜಯ ವೃತ್ತದಲ್ಲಿ ತಲೆ ಮೇಲೆ ಕಲ್ಲು ಹೊತ್ತು ಧರಣಿ ನಡೆಸಿದ ಸೇನೆಯ ಕಾರ್ಯಕರ್ತರು, ಕಾವೇರಿ ಹೋರಾಟಕ್ಕೆ ಇಳಿಯದ ಜಿಲ್ಲೆಯ ಶಾಸಕರು ಮತ್ತು ಸಂಸದರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಘೋಷಣೆ ಮೊಳಗಿಸಿದರು.

ಜಿಲ್ಲೆಯ ಶಾಸಕರು, ಸಂಸದರು ಕಾವೇರಿ ನೀರು ಉಳಿವಿಗಾಗಿ ಬೀದಿಗಿಳಿದು ಹೋರಾಟ ಮಾಡಬೇಕು, ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು, ಈಗಾಗಲೇ ನೆರೆ ರಾಜ್ಯಕ್ಕೆ 18 ಟಿಎಂಸಿ ನೀರು ಹರಿದು ಹೋಗಿದ್ದು ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಹಾಗಾಗಿ ಮಂಡ್ಯ ಜಿಲ್ಲೆಗೆ 100 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು, ರೈತರ ಹಿತ ಕಡೆಗಣಿಸಿ ನೀರು ಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಮಹಾಂತಪ್ಪ,ಶಿವಾಲಿ, ನಂದೀಶ್, ಮಂಜುನಾಥ್ ಬೆಟ್ಟಳ್ಳಿ, ಅರಕೆರೆ ರಘು, ಗುತ್ತಲು ಚಂದ್ರು, ಜಯಮ್ಮ, ದರ್ಶನ್, ರಾಜೇಶ್, ನಂದೀಶ್ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!