Sunday, November 22, 2026

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಅಗತ್ಯ ಅನುದಾನ – ಶಾಸಕ ರವಿಕುಮಾರ್

ಸರಕಾರಿ ಶಾಲೆಗಳ ಅಭಿವೃದ್ದಿಗೆ ತಮ್ಮ ಸರಕಾರ ಅಗತ್ಯ ಅನುದಾನ ಒದಗಿಸಲಿದೆ. ರಾಜ್ಯದಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕಗೊಳಿಸಿ ಯಾವುದೇ ಸರಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಶಾಸಕ ರವಿಕುಮಾರ್ ಭರವಸೆ ನೀಡಿದರು.

ಮಂಡ್ಯ ತಾಲ್ಲೂಕಿನ ಬಿ ಗೌಡಗೆರೆ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಗೆ ಚಲುವರಾಯಸ್ವಾಮಿ ಹಿತೈಷಿಗಳ ಬಳಗ ಸಮವಸ್ತ್ರ ನೀಡುವ ಕಾರ್ಯಕ್ರಮವನ್ಮುದ್ದೇಶಿಸಿ ಅವರು ಮಾತನಾಡಿದರು.

ಶಿಥಿಲಗೊಂಡಿದ್ದ ಎರಡು ಶಾಲಾ ಕೊಠಡಿಗಳನ್ನು ಸಂಪೂರ್ಣ ತೆರವುಗೊಳಿಸಿ ನೂತನ ಕೊಠಡಿ ನಿರ್ಮಿಸಿ ಕೊಡುವಂತೆ ಶಾಲೆಯ ಮುಖ್ಯೋಪಾಧ್ಯಯರು ಸಲ್ಲಿಸಿದ ಮನವಿಗೆ ಶಾಸಕರು ಸಮ್ಮತಿ ಸೂಚಿಸಿದರು.

ಅಗತ್ಯ ಕಾರ್ಯಕ್ರಮ ರೂಪಿಸಲಿ

ಸರ್ಕಾರಿ ಶಾಲೆಗಳನ್ನು ಬಲವರ್ಧನೆಗೊಳಿಸಲು ರಾಜ್ಯ ಸರ್ಕಾರ ಅಗತ್ಯ ಕಾರ್ಯಕ್ರಮ ರೂಪಿಸಬೇಕು ಎಂದು ಕರುನಾಡ ಸೇವಕರು ಸಂಘಟನೆಯ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ಕರೆ ನೀಡಿದರು.

ಸಚಿವ ಚಲುವರಾಯಸ್ವಾಮಿ ಜನ್ಮದಿನವನ್ನು ಸರಕಾರಿ ಶಾಲೆಯ ಮಕ್ಕಳಿಗೆ ಉಚಿತ ಸಮವಸ್ತ್ರ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಪ್ರತಿನಿತ್ಯ ರಾಜ್ಯದ ಒಂದಿಲ್ಲೊಂದು ಮೂಲೆಯಲ್ಲಿ ಸರಕಾರಿ ಶಾಲೆಗಳು ಬಾಗಿಲು ಮುಚ್ಚುತ್ತಿವೆ. ಅಗತ್ಯ ಶಿಕ್ಷಕರ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸರಕಾರಿ ಕನ್ನಡ ಶಾಲೆಗಳು ಅಸ್ತಿತ್ವದ ಭೀತಿ ಎದುರಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ ದಿನೇ ದಿನೇ ಖಾಸಗಿಯವರ ಪಾಲಾಗುತ್ತಿದೆ.ಸರಕಾರಿ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸದಿದ್ದರೆ ಹಣವಿದ್ದವರಿಗೆ ಮಾತ್ರ ಶಿಕ್ಷಣ ಎಂಬ ಪದ್ದತಿ ಜಾರಿಗೆ ಬರಲಿದೆ.

ಸರಕಾರಿ ಶಾಲೆ ಮತ್ತು ಆಸ್ಪತ್ರೆಗಳ ಕಾರಣಕ್ಕೆ ಖಾಸಗಿಯವರು ಶಿಕ್ಷಣದಲ್ಲಿ ಮೇಲುಗೈ ಸಾಧಿಸಲು ಸಾಧ್ಯವಾಗಿಲ್ಲ.ಸರಕಾರ ತನ್ನ ಆರನೇ ಗ್ಯಾರಂಟಿಯಾಗಿ ಸರಕಾರಿ ಶಾಲೆ ಮತ್ತು ಆಸ್ಪತ್ರೆಗಳ ಸುಧಾರಣೆಗೆ ಅಗತ್ಯ ಅನುದಾನ ಒದಗಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.ಅತೀ ಹೆಚ್ಚು ಅಂಕ ಪಡೆದಿದ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಚಲುವರಾಯಸ್ವಾಮಿ ಹಿತೈಷಿಗಳ ಬಳಗದ ಅಧ್ಯಕ್ಚ ನವೀನ್ ಕುಮಾರ್ ಜಿಬಿ, ಮನ್ ಮುಲ್  ಅಧ್ಯಕ್ಷ ಉಮ್ಮಡಹಳ್ಳಿ ಶಿವಕುಮಾರ್, ಗ್ರಾಮದ ಮುಖಂಡ ಜಯರಾಂ, ಎಸ್’ಡಿಎಂಸಿ ಅಧ್ಯಕ್ಷ ಪ್ರಶಾಂತ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ