ಧಾರವಾಡದ ವಿದ್ಯಾ ವರ್ಧಕ ಸಂಘ, ಶಿವಮೊಗ್ಗದ ಕರ್ನಾಟಕ ಸಂಘ ನಶಿಸಿ ಹೋಗುವ ಹಂತ ತಲುಪಿವೆ. ಕನ್ನಡ ಸಾಹಿತ್ಯ, ಸಂಸ್ಕೃತಿ ಬೆಳೆಸುತ್ತಿರುವ ಕನ್ನಡ ಸಂಘಗಳನ್ನು ಬಲವರ್ಧನೆಗೊಳಿಸುವುದು ಸಾರ್ವಜನಿಕರು ಹಾಗೂ ಸರ್ಕಾರದ ಜವಾಬ್ದಾರಿ ಎಂದು ಅಪ್ಪಗೆರೆ ತಿಮ್ಮರಾಜು ತಿಳಿಸಿದರು.
ಮಂಡ್ಯ ನಗರದ ಮಹಿಳಾ ಸರ್ಕಾರಿ ಕಾಲೇಜಿನ ವನರಂಗದಲ್ಲಿ ಭಾನುವಾರ ಕರ್ನಾಟಕ ಸಂಘ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾ ಡಿದ ಅವರು, ಮಂಡ್ಯದ ಕರ್ನಾಟಕ ಸಂಘ ಪ್ರವರ್ಧಮಾನಕ್ಕೆ ಬೆಳೆದು ನಿಂತು ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಸೇವೆಯಲ್ಲಿ ಅವಿರತವಾಗಿ ತೊಡಗಿಸಿಕೊಂಡಿದೆ. ನಿರಂತರ ಚಟುವಟಿಕೆಗಳಿಂದ ಸದೃಢವಾಗಿ ಬೆಳವಣಿಗೆ ಕಾಣುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಒಂದು ಸಂಘ ಕಟ್ಟೆ ಬೆಳೆಸುವುದು ಸುಲಭದ ಮಾತಲ್ಲ. ಆದರೆ, ಪ್ರೊ.ಬಿ.ಜಯಪ್ರಕಾಶಗೌಡರು ಕರ್ನಾಟಕ ಸಂಘದ ಸಾರಥಿಯಾಗಿರು ಸಾಂಸ್ಕೃತಿಕ ರಾಯಭಾರಿಯೂ ಆಗಿ ಅಲ್ಲದೇ ಕನ್ನಡ, ಕನ್ನಡ ಸಾಹಿತ್ಯದ ಕೆಲಸವೆಂದರೆ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಇಂತಹ ಸಂಘ ಇನ್ನಷ್ಟು ಕ್ರಿಯಾಶೀಲ ವಂತೆ ಸಾಂಸ್ಕೃತಿಕವಾಗಿ ಬೆಳವಣಿಗೆ ಸಾಧಿಸಲಿ ಎಂದು ಆಶಿಸಿದರು. ಇದೇ ವೇಳೆ ಬೆಳಗಾಗಿ ನಾನೆದ್ದು ಯಾರ್ಯಾರ ನೆನೆಯಲಿ, ಓ ನನ್ನ ಚೇತನ ಆಗು ನೀ ಆನಿ ಕೇತನ ಸೇರಿದಂತೆ ಹಲವು ಗೀತೆಗಳನ್ನು ಹಾಡಿ ಪ್ರೇಕ್ಷಕರ ಮನತಣಿಸಿದರು.

ಲಯನ್ಸ್ ಸಂಸ್ಥೆಯ ಕೆ.ದೇವೇಗೌಡ ಮಾತನಾಡಿ, ಜನತಾ ಶಿಕ್ಷಣ ಕಟ್ಟಿದ ಕೆ.ವಿ.ಶಂಕರಗೌಡರು ಅವರ ಕುಟುಂಬಕ್ಕೆ ಸಂಸ್ಥೆಯನ್ನು ಬಿಟ್ಟುಕೊಡಲಿಲ್ಲ, ಅದೇ ರೀತಿ ಹೆಚ್.ಡಿ. ಚೌಡಯ್ಯನವರು ಕೂಡ ಅವರ ಕುಟುಂಬಕ್ಕೆ ಟ್ರಸ್ಟ್ ನೀಡದೆ ಕೆ.ವಿ.ಶಂಕರಗೌಡರ ಮೊಮ್ಮಗನಿಗೆ ಜವಾಬ್ದಾರಿ ಒಪ್ಪಿಸಿದರು. ಇದೇ ಸಂಸ್ಕಾರ, ಕುಟುಂಬದವರ ಏಳಿಗೆ ಬಗ್ಗೆ ಚಿಂತಿಸದೆ ಸಮಾಜದ ಬಗ್ಗೆ ಕಳಕಳಿಯಿಂದ ಆ ಸಂಸ್ಥೆ ಯಾವ ರೀತಿ ಬೆಳವಣಿಗೆ ಕಾಣುತ್ತದೆ ಎನ್ನುವುದಕ್ಕೆ ಜನತಾ ಶಿಕ್ಷಣ ಟ್ರಸ್ಟ್, ಕರ್ನಾಟಕ ಸಂಘ ಸಾಕ್ಷಿಯಾಗಿದೆ ಎಂದರು.
ಕೆ.ವಿ.ಶಂಕರಗೌಡರ ಹೆಸರನ್ನು ರಾಜ್ಯ-ರಾಷ್ಟ್ರದಾದ್ಯಂತ ವಿಸ್ತರಿಸುವಂತೆ ಮಾಡುತ್ತಿರುವವರು ಪ್ರೊ.ಬಿ.ಜಯಪ್ರಕಾಶಗೌಡರು ತಮ್ಮ ಪ್ರತಿ ಭಾಷಣದಲ್ಲೂ ಶಂಕರಗೌಡರನ್ನು, ಚೌಡಯ್ಯನವರನ್ನು ನೆನೆಸಿಕೊಳ್ಳುತ್ತಲೇ ಇರುತ್ತಾರೆ ಆ ಮಹಾನ್ ಚೇತನಗಳು ಹುಟ್ಟಿದ ನಾಡಿನಲ್ಲಿರುವ ಕರ್ನಾಟಕ ಸಂಘ ಇನ್ನೂ ಹೆಚ್ಚು ಪ್ರವರ್ಧಮಾನಕ್ಕೆ ಬೆಳೆಯಬೇಕು. ಅದಕ್ಕೆ ನಾವೆಲ್ಲರೂ ಬೆಂಬಲವಾಗಿ ನಿಲ್ಲಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಮತ್ತೇಕೆರೆ ಜಯರಾಂ, ಹಿರಿಯ ಶಿಕ್ಷಕಿ ಚಲುವೇಗೌಡ, ಲಂಕೇಶ್ ಮಂಗಲ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 42 ಜನರಿಗೆ 15 ಸಾವಿರ ರೂ ಪ್ರಶಸ್ತಿ ಫಲಕ ನೀಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಪರಿಸರ ಇಂಜಿನಿಯರಿಂಗ್ ಸಂಘದ ಅಧ್ಯಕ್ಷ ಕೆ.ಸಿ.ಜಯರಾಮು, ಮಹಿಳಾ ಸರ್ಕಾರಿ ಕಾಲೇಜು ಪ್ರಾಂಶುಪಾಲ ಪ್ರೊ.ಕೆ.ಗುರುರಾಜಪ್ರಭು ಇತರರಿದ್ದರು.




