Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ ಪಟ್ಟಣದ ಸಮಗ್ರ ಅಭಿವೃದ್ದಿಗೆ ಯತ್ನ: ಪುಟ್ಟಸ್ವಾಮಿ

ಪುರಸಭೆ ವ್ಯಾಪ್ತಿಯ ಜನರಿಗೆ ಮೂಲಭೂತ ಸೌಲಭ್ಯವನ್ನು ನೀಡುವುದರ ಜೊತೆಗೆ ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ದಿಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಪುರಸಭೆಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಕಚೇರಿಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿ ಹಾಗೂ ಜೆಡಿಎಸ್ ನಿಂದ ಉಪಾಧ್ಯಕ್ಷರಾಗಿ ಆಯ್ಕೆಯಾದ ನಂತರ ಇಂದು ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಾಗಿದೆ, ಸಾರ್ವಜನಿಕರು ನೇರವಾಗಿ ಬಂದು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಶಾಸಕರು ಹಾಗೂ ಕೇಂದ್ರ ಸಚಿವರ ಸಹಕಾರ ಪಡೆದು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ತರಲಾಗುವುದು ,ಜೆಡಿಎಸ್ ಮತ್ತು ಬಿಜೆಪಿಯ ಸಹಕಾರದೊಂದಿಗೆ ಆಯ್ಕೆಯಾಗಿದ್ದು, ಎಲ್ಲ ಸದಸ್ಯರ ಸಲಹೆ ಪಡೆದು ಪಟ್ಟಣದ ಅಭಿವೃದ್ಧಿಗೆ ಮುಂದಾಗುತ್ತೇವೆ. ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಜನರಿಗೆ ನೀರು ಒದಗಿಸಲಾಗುವುದು. ಸ್ಥಳೀಯ ಶಾಸಕರ ಬಳಿ ಚರ್ಚಿಸಿ ಸರ್ಕಾರದಿಂದ ಹೆಚ್ಚಿನ ಅನುದಾನ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಉಪಾಧ್ಯಕ್ಷ ಎನ್.ಬಸವರಾಜು(ಜಯಸಿಂಹ) ಮಾತನಾಡಿ, ಅಭಿವೃದ್ದಿಯಲ್ಲಿ ರಾಜಕೀಯ ಮಾಡುವುದಿಲ್ಲ, ಎಲ್ಲಾ ಸದಸ್ಯರ ಸಹಕಾರದೊಂದಿಗೆ ಪಟ್ಟಣವನ್ನು ಅಭಿವೃದ್ದಿಗೊಳಿಸಲಾಗುವುದು, ಶಾಸಕರ ವಿಶ್ವಾಸ ತೆಗೆದುಕೊಂಡು ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿಕೊಂಡು ಅಭಿವೃದ್ದಿಗೆ ಮುಂದಾಗುತ್ತೇವೆ, ತಮ್ಮ ಅಧಿಕಾರಾವಧಿಯಲ್ಲಿ ಶಾಶ್ವತವಾಗಿ ಜನರ ಮನಸ್ಸಿನಲ್ಲಿ ಉಳಿಯುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಇದಕ್ಕೂ ಮುನ್ನ ಅಧ್ಯಕ್ಷ, ಉಪಾಧ್ಯಕ್ಷರು ಪಟ್ಟಣದ ಪ್ರವಾಸಿ ಮಂದಿರ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಜೆಡಿಎಸ್ ಎಸ್ಸಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಕೆ.ಅನ್ನದಾನಿ, ಬಿಜೆಪಿ ಮುಖಂಡ ಜಿ.ಮುನಿರಾಜು, ಸದಸ್ಯರಾದ ನೂರುಲ್ಲಾ, ಟಿ.ನಂದಕುಮಾರ್, ನಾಗೇಶ್, ರವಿ, ಮುಖಂಡರಾದ ನಾಗರಾಜು, ಕೃಷ್ಣ, ರಾಮಣ್ಣ, ಕೃಷ್ಣ, ಅಂಕರಾಜು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ