Friday, September 20, 2024

ಪ್ರಾಯೋಗಿಕ ಆವೃತ್ತಿ

ಹಿಜಾಬ್ ನಿಷೇಧ ವಾಪಸ್| ‘ಮತ್ತೆ ಕಾಲೇಜಿಗೆ ಹೋಗುತ್ತೇನೆ’ ಎಂದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್

ಹಿಜಾಬ್ ವಿವಾದ ಮುನ್ನೆಲೆಯಲ್ಲಿದ್ದಾಗ ಕೇಸರಿ ಶಾಲು ಧರಿಸಿ ಗಲಾಟೆ ಮಾಡಿದ್ದ ವಿದ್ಯಾರ್ಥಿಗಳ ಮುಂದೆ ಘೋಷಣೆ ಕೂಗಿ ದೇಶದ ಗಮನ ಸೆಳೆದಿದ್ದ ಮಂಡ್ಯದ ಮುಸ್ಕಾನ್‌ ಮತ್ತೆ ಮಾತನಾಡಿದ್ದಾರೆ. ‘ನಾನು ಮತ್ತೆ ಕಾಲೇಜಿಗೆ ಹೋಗುತ್ತೇನೆ’ ಎಂದಿದ್ದಾರೆ.

ಹಿಜಾಬ್ ನಿರ್ಬಂಧದ ಆದೇಶವನ್ನು ಹಿಂಪಡೆಯಲು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಹೇಳಿಕೆಗೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ, ಹಿಜಾಬ್ ನಿಷೇಧದ ಕಾರಣದಿಂದ ಶಾಲೆ-ಕಾಲೇಜು ತೊರೆದಿದ್ದ ಮುಸ್ಲಿಂ ವಿದ್ಯಾರ್ಥಿನಿಯರು ಸರ್ಕಾರದ ನಿಲುವನ್ನು ಸ್ವಾಗತಿಸಿದ್ದಾರೆ. ಸಂತೋಷ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸ್ವಾಗತಿಸಿರುವ ಮುಸ್ಕಾನ್, “ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹಮ್ಮದ್​ ಅವರಿಗೆ ಧನ್ಯವಾದಗಳು. ನನ್ನ ಓದು ಅರ್ಧಕ್ಕೆ ನಿಂತಿತ್ತು. ಈಗ ನಾನು ಮತ್ತೆ ಕಾಲೇಜಿಗೆ ಹೋಗುತ್ತೇನೆ” ಎಂದು ಹೇಳಿದ್ದಾರೆ.

ಕೃಪೆ: ಈದಿನ.ಕಾಂ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!