Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿ ವೇತನ ಸದ್ಬಳಕೆಗೆ ಸಲಹೆ

ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಇದರ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷ ಎಚ್‌.ಎಸ್‌.ಮಂಜು ಸಲಹೆ ನೀಡಿದರು.

ಮಂಡ್ಯ ನಗರಸಭೆ ಆವರಣದಲ್ಲಿ ಆಯೋಜಿಸಿದ್ದ ಬಿಪಿಎಲ್‌ ಕಾರ್ಡ್‌ ಕುಟುಂಬ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸಹಾಯ ಧನದ ಚೆಕ್‌ ವಿತರಿಸಿ ಅವರು ಮಾತನಾಡಿದರು.

<ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ತಲಾ 3000 ರೂಪಾಯಿಗಳಂತೆ 50 ವಿದ್ಯಾರ್ಥಿಗಳಿಗೆ ವಿಶೇಷ ನೆರವು ನೀಡಲಾಗುತ್ತಿದೆ. ಪಿಯುಸಿಯಲ್ಲಿ ವೃತ್ತಿಪರ  ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ತಲಾ 4500 ರೂಪಾಯಿಗಳನ್ನು 50 ವಿದ್ಯಾರ್ಥಿಗಳಿಗೆ ನೆರವು ನೀಡಲಾಗುತ್ತಿದೆ. ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಬಿಎಂ, ಬಿಸಿಎ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಲಾ 6000 ರೂಪಾಯಿಗಳನ್ನು ಸೇರಿದಂತೆ ಆಯಾ ಕೋರ್ಸ್‌ಗಳಿಗೆ ತಕ್ಕಂತೆ ಅನುದಾನ ನೀಡಲಾಗುತ್ತಿದೆ ಎಂದು ವಿವರಿಸಿದರು.

ಎಂಬಿಬಿಎಸ್‌ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಅನ್ನು ನೀಡಲಾಗುತ್ತಿದೆ. ಬಡಜನರಿಗೆ ಸೋಲಾರ್‌ ಲ್ಯಾಟಿನ್‌ಗಳನ್ನು ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು ನೀಡಲಾಗುತ್ತಿದೆ, ಅಂಬೇಡ್ಕರ್‌ ಆವಾಸ್‌ ಯೋಜನೆ, ರಾಜೀವ್‌ಗಾಂಧಿ ಆವಾಸ್‌ ಯೋಜನೆಯ ಫಲಾನುಭವಿಗಳಿಗೆ ಮನೆಗಳನ್ನು ನೀಡಲಾಗುತ್ತಿದೆ ಇದರ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

ಪೌರಕಾರ್ಮಿಕರಿಗೆ ಸಮವಸ್ತ್ರಗಳನ್ನು ವಿತರಣೆ ಮಾಡುತ್ತಿದ್ದೇವೆ, ನಗರಸಭೆಯಲ್ಲಿ ಇರುವಂತಹ ಯೋಜನೆಗಳನ್ನು ಬಳಸಿಕೊಳ್ಳಬೇಕು. ಯುವಕರೇ ದೇಶದ ಬೆನ್ನಲುಬು ಆ ನಿಟ್ಟಿನಲ್ಲಿ ಅವರಿಗೆ ಅನುಕೂಲಕರವಾದ ಯೋಜನೆಗಳನ್ನು ನೀಡಲಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಫಲಾನುಭವಿಗಳಿಗೆ ಯೋಜನೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಾಸಕ ಎಂ.ಶ್ರೀನಿವಾಸ್‌ ಅವರು ವಿದ್ಯಾರ್ಥಿಗಳಿಗೆ ಅನುದಾನ ಚೆಕ್‌ ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ, ಪೌರಾಯುಕ್ತ ಮಂಜುನಾಥ್, ನಗರಸಭೆ ಸದಸ್ಯರಾದ ನಹೀಂ, ಪೂರ್ಣಿಮಾ, ಮಂಜುಳಾ, ಸೌಭಾಗ್ಯ, ಶ್ರೀಧರ್, ನಾಗೇಶ್, ವಿದ್ಯಾ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!