ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಪರೀಕ್ಷೆಯಲ್ಲಿ ಒಳ್ಳೆಯ ಅಂಕ ಗಳಿಸಿ ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕೆಂದು ಶ್ರೀ ಶಂಭು ಸೇವಾ ಟ್ರಸ್ಟ್ ಹಾಗೂ ಮನ್ ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಕಿವಿಮಾತು ಹೇಳಿದರು.
ಮಂಡ್ಯ ತಾಲೂಕಿನ ಕೆರಗೋಡು ಹೋಬಳಿಯ ಉಪ್ಪರಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ್ಪರಕನಹಳ್ಳಿ, ಮಲ್ಲಾಘಟ್ಟ, ಚೋಕನಹಳ್ಳಿ, ಕರಡಿಕೊಪ್ಪಲು, ಹಂಪಾಪುರ ಗ್ರಾಮಗಳ ಸರ್ಕಾರಿ ಶಾಲಾ ಮಕ್ಕಳಿಗೆ ಶ್ರೀ ಶಂಭು ಸೇವಾ ಟ್ರಸ್ಟ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ ವಿತರಿಸಿ ಅವರು ಮಾತನಾಡಿದರು.
ಮಕ್ಕಳ ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು.ನಮ್ಮ ಶಂಭು ಸೇವಾ ಟ್ರಸ್ಟ್ ಮೂಲಕ ಈಗಾಗಲೇ ಬಹುತೇಕ ಗ್ರಾಮಗಳ ಸರ್ಕಾರಿ ಶಾಲ ಮಕ್ಕಳಿಗೆ ಬ್ಯಾಗ್ ಗಳನ್ನು ನೀಡಲಾಗಿದೆ.ಇನ್ನೂ ಮುಂದಿನ ದಿನಗಳಲ್ಲಿ ಉಳಿದಿರುವ ಎಲ್ಲಾ ಗ್ರಾಮಗಳ ಮಕ್ಕಳಿಗೆ ಬ್ಯಾಗ್ ವಿತರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಪ್ಪರಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಲಕ್ಷ್ಮಿ, ಕರ್ನಾಟಕ ರಾಜ್ಯ ಗಂಗಾ ಮತಸ್ಥರ ಉಪಾಧ್ಯಕ್ಷ ತಮ್ಮಣ್ಣ, ಪಾಲನೇತ್ರ, ಬಿ.ಆರ್. ಸುರೇಶ್, ಪುಟ್ಟಸ್ವಾಮಿ, ಬಾಲರಾಜು, ಮಾಸ್ತಿಗೌಡ , ಹಾಗೂ ಗ್ರಾಮದ ಮುಖಂಡರು, ಯುವಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.




