Sunday, March 3, 2024

ಪ್ರಾಯೋಗಿಕ ಆವೃತ್ತಿ

ಡೆಂಗ್ಯು ಜ್ವರಕ್ಕೆ ವಿದ್ಯಾರ್ಥಿನಿ ಬಲಿ

ಡೆಂಗ್ಯು ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಮರಳಾಗಾಲ ನಿವಾಸಿ ಶ್ರೀಮತಿ ಮಣಿ ಹಾಗೂ ಶ್ರೀ ಚಿಕ್ಕಮಾದಶೆಟ್ಟಿ ಇವರ ಪುತ್ರಿ ಕು.ಪೂರ್ಣಿಮ(14) ಸಾವನ್ನಪ್ಪಿರುವ ವಿದ್ಯಾರ್ಥಿನಿ. ಈಕೆ ದೊಡ್ಡಪಾಳ್ಯದ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಪೂರ್ಣಿಮಾ ನಿಧನದ ಅಂಗವಾಗಿ ಇಂದು ಶಾಲೆಗೆ ರಜೆ ನೀಡಲಾಗಿತ್ತು. ವಿದ್ಯಾರ್ಥಿನಿಯ ಸಾವಿಗೆ ಶಿಕ್ಷಕರು ಹಾಗೂ ಸಹಪಾಠಿಗಳು ಕಂಬನಿ ಮಿಡಿದಿದ್ದಾರೆ.

ವಿದ್ಯಾರ್ಥಿನಿಯ ಅಂತ್ಯಕ್ರಿಯೆ ಸ್ವಗ್ರಾಮ ಮರಳಾಗಾಲ ಗ್ರಾಮದಲ್ಲಿ ನಡೆಯಿತು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!