Thursday, September 19, 2024

ಪ್ರಾಯೋಗಿಕ ಆವೃತ್ತಿ

ಸುದೀಪ್ ಅಭಿನಯದ ಸಿನಿಮಾ, ಟಿವಿ ಶೋ ಪ್ರಸಾರ ಮಾಡದಂತೆ ಚುನಾವಣಾ ಆಯೋಗಕ್ಕೆ ಒತ್ತಾಯ : ವಕೀಲ ಕೆ.ಪಿ.ಶ್ರೀಪಾಲ

ನಟ ಕಿಚ್ಚ ಸುದೀಪ್ ಅವರ​ ಚಲನಚಿತ್ರಗಳನ್ನು, ಟಿ.ವಿ.ಶೋಗಳನ್ನು ಮತ್ತು ಅವರು ಇರುವ ಜಾಹಿರಾತುಗಳ ಪ್ರದರ್ಶನಕ್ಕೆ ತಡೆ ಹಿಡಿಯಬೇಕೆಂದು ಶಿವಮೊಗ್ಗದ ವಕೀಲ ಕೆ.ಪಿ.ಶ್ರೀಪಾಲ  ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯ  ಹಿನ್ನೆಲೆ ನಟ ಕಿಚ್ಚ ಸುದೀಪ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ.  ವಕೀಲ ಕೆ.ಪಿ ಶ್ರೀಪಾಲ ಎಂಬುವರು ಪತ್ರದಲ್ಲಿ ಕನ್ನಡದ ಚಲನಚಿತ್ರ ನಟ ಕಿಚ್ಚ ಸುದೀಪ್​ ಅವರು ಬಿಜೆಪಿಯ ಸ್ಟಾರ್​ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವವರೆಗೂ ಅವರ ನಟನೆಯ ಯಾವುದೇ ಚಲನಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿ.ವಿಗಳಲ್ಲಿ ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ ಟಿ.ವಿ ಶೋಗಳು ಪ್ರಸಾರವಾಗದಂತೆ ಮತ್ತು ನಟಿಸಿರುವ ಜಾಹಿರಾತುಗಳು ಸಹ ಪ್ರಸಾರವಾಗದಂತೆ ತಡೆ ಹಿಡಿಯಬೇಕೆಂದು  ಎಂದುಚುನಾವಣಾ ಆಯೋಗ ಪತ್ರ ಬರೆದು ಕ್ರಮ ಜರುಗಿಸಬೇಕು. ಎಂದು ಒತ್ತಾಯಿಸಿದ್ದಾರೆ.

“ಅವರು ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದನ್ನು ಅವರೆ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನಚಿತ್ರಗಳು, ಟಿ.ವಿ ಶೋಗಳು ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ. ಆದ್ದರಿಂದ ತಕ್ಷಣದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳುವಂತೆ ವಕೀಲ ಕೆ.ಪಿ ಶ್ರೀಪಾಲ ಅವರು ಒತ್ತಾಯಿಸಿದ್ದಾರೆ.”

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!