Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ | ಸುಧಾ ಶಿವರಾಮೇಗೌಡ ನಾಮಪತ್ರ ಸಲ್ಲಿಕೆ

ನಾಗಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸುಧಾ ಶಿವರಾಮೇಗೌಡ ಮಂಗಳವಾರ ನಾಮಪತ್ರ ಸಲ್ಲಿಸಿದರು.

ನಾಗಮಂಗಲದ ಪಟ್ಟಣದ ಟಿ ಬಿ ಬಡಾವಣೆಯಲ್ಲಿರುವ ವಿಘ್ನವಿನಾಯಕನಿಗೆ ಪೂಜೆ ಸಲ್ಲಿಸಿ, ತೆರೆದ ವಾಹನದಲ್ಲಿ ರೋಡ್ ಶೋನಲ್ಲಿ ಪಾಲ್ಗೊಂಡು ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರು ಪಾಲ್ಗೊಂಡಿದ್ದರು.

ಉಮೇದುವಾರಿಕೆ ಸಲ್ಲಿಸಿದ ನಂತರ ನಾಗಮಂಗಲದ ಪಟ್ಟಣದ ಸೌಮ್ಯಕೇಶವ ಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತರಾಗಿ ತೆರಳಿ ಸೌಮ್ಯಕೇಶವಸ್ವಾಮಿಯ ಆಶೀರ್ವಾದ ಪಡೆದುಕೊಂಡು ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಆಗಮಿಸುತಿದ್ದಂತೆ ಕಾರ್ಯಕರ್ತರು ಬೃಹತ್ ಗಾತ್ರದ ಹಾರ ಹಾಕುವ ಮೂಲಕ ಸ್ವಾಗತಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!