Thursday, November 19, 2026

ಪ್ರಾಯೋಗಿಕ ಆವೃತ್ತಿ

ಇನ್ಫೋಸಿಸ್‌ ಫೌಂಡೇಷನ್‌ ಅಧ್ಯಕ್ಷೆ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ

ರಾಜ್ಯಸಭೆ ಸದಸ್ಯರಾಗಿ ಇನ್ಫೋಸಿಸ್‌ ಫೌಂಡೇಷನ್‌ನ ಅಧ್ಯಕ್ಷರಾದ ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮ ನಿರ್ದೇಶನ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿರುವ ರಾಷ್ಟ್ರಪತಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇವರು ಸಮಾಜ ಸೇವೆ, ಪರೋಪಕಾರ ಹಾಗೂ ಶಿಕ್ಷಣ ಒಳಗೊಂಡ ಹಲವಾರು ಕ್ಷೇತ್ರಗಳಲ್ಲಿ ಅಪಾರ ಹಾಗೂ ಸ್ಪೂರ್ತಿದಾಯಕ ಸೇವೆ ಸಲ್ಲಿಸಿದ್ದಾರೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿ ನಮ್ಮ ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಲಿದೆ. ನಮ್ಮ ದೇಶದ ಭವಿಷ್ಯ ರೂಪಿಸುವ ಮಹಿಳೆಯರಿಗೆ ಶಕ್ತಿ ಮತ್ತು ಸಾಮರ್ಥ್ಯವನ್ನು ರೂಪಿಸುತ್ತದೆ. ಅವರ ಸಂಸದೀಯ ಅವಧಿ ಫಲದಾಯಕವಾಗಿರಲಿ” ಎಂದು ಬರೆದುಕೊಂಡಿದ್ದಾರೆ.

ಸುಧಾ ಮೂರ್ತಿ ಅವರು ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕರಾಗಿರುವ ಎನ್‌ ಆರ್‌ ನಾರಾಯಣ ಮೂರ್ತಿ ಅವರ ಪತ್ನಿ. ಇವರ ಪುತ್ರಿ ಅಕ್ಷತಾ ಮೂರ್ತಿ ಇಂಗ್ಲೆಂಡ್ ಪ್ರಧಾನಿ ರಿಶಿ ಸುನಕ್‌ ಅವರ ಪತ್ನಿಯಾಗಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ